ಕರ್ನಾಟಕ

karnataka

By

Published : May 26, 2021, 3:08 PM IST

ETV Bharat / state

ದೇವರ ದಯೆಯಿಂದ ಕೊರೊನಾ ಕಡಿಮೆ ಆಗ್ತಿದೆ : ರಮೇಶ್ ಜಾರಕಿಹೊಳಿ‌

ಗ್ರಾಮೀಣ ಭಾಗದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಪಿಡಿಒ ನೇತೃತ್ವದಲ್ಲಿ ಟಾಸ್ಕ್​ಫೋರ್ಸ್ ರಚಿಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ..

ರಮೇಶ್ ಜಾರಕಿಹೊಳಿ‌
ರಮೇಶ್ ಜಾರಕಿಹೊಳಿ‌

ಬೆಳಗಾವಿ: ದೇವರ ದಯೆಯಿಂದ ಇದೀಗ ಸೋಂಕು ಕಡಿಮೆ ಆಗುತ್ತಿದೆ. ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿದರೆ ಇನ್ನೊಂದು ವಾರದಲ್ಲಿ ಕೊರೊನಾ ಸೋಂಕು ಹರಡುವುದು ನಿಯಂತ್ರಣಕ್ಕೆ ಬರಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

ಕೊರೊನಾ ನಿಯಂತ್ರಕ್ಕೆ ಬರುತ್ತೆ ಅಂದರು ರಮೇಶ್ ಜಾರಕಿಹೊಳಿ‌..

ಗೋಕಾಕ್​ ತಾಲೂಕಿನಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ.

ಗ್ರಾಮೀಣ ಭಾಗದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಪಿಡಿಒ ನೇತೃತ್ವದಲ್ಲಿ ಟಾಸ್ಕ್​ಫೋರ್ಸ್ ರಚಿಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಸೋಂಕಿತರನ್ನು ಕೇರ್ ಸೆಂಟರ್​ಗೆ ದಾಖಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮಾಸ್ಕ್, ಸ್ಯಾನಿಟೈಸರ್ ಬಳಕೆ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮದುವೆ ಹಾಗೂ ಅಂತ್ಯಸಂಸ್ಕಾರಗಳಲ್ಲಿ ಹೆಚ್ಚಿನ ಜನ ಸೇರದಂತೆ ಮನವಿ ಮಾಡುತ್ತೇನೆ ಎಂದರು.

ಓದಿ:ವಿಶ್ವಪ್ರಿಯ ಫೈನಾನ್ಸ್ ವಂಚನೆ : ತನಿಖಾ ಸಂಸ್ಥೆಗೆ ವಹಿಸಲು ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

ABOUT THE AUTHOR

...view details