ಬೆಳಗಾವಿ:2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 ರ‍್ಯಾಂಕ್ ಪಡೆದವ ಆಯ್ಕೆಯಾಗಿದ್ದಾನೆ. ತಪ್ಪು ಉತ್ತರವನ್ನು ತಿದ್ದಿ ಆತನನ್ನು ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪ ಶಿಕ್ಷಕರ ಆಯ್ಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಪಾರದರ್ಶಕವಾಗಿಲ್ಲ. ಮಾಹಿತಿ ಹಕ್ಕು ಅಧಿನಿಯಮ ಪ್ರಕಾರ ಮಾಹಿತಿ ಪಡೆದಿದ್ದೇನೆ. ಇದರಿಂದಾಗಿ ನನಗೆ ಅನ್ಯಾಯವಾಗಿದ್ದು, ಸ್ಪಷ್ಟವಾಗಿ ತಿಳಿದು ಬಂದಿದೆ. ನ್ಯಾಯಕ್ಕಾಗಿ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಿದ್ದೇನೆ. ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:2014 -15 ಸಾಲಿನ ಶಿಕ್ಷಕರ ನೇಮಕಾತಿ: 11 ಶಿಕ್ಷಕರು ಸಿಐಡಿ ವಶಕ್ಕೆ
10 ವರ್ಷದಿಂದ ನಾನು ನ್ಯಾಯಕ್ಕಾಗಿ ಅಲೆದಾಡುತ್ತಿದ್ದೇನೆ. ನ್ಯಾಯಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ದವಾಗಿದ್ದೇನೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ನ್ಯಾಯ ಕೊಡಿಸಬೇಕು. ವರ್ಷಗಟ್ಟಲೇ ಹಗಲು ರಾತ್ರಿ ಓದಿದ ಬಡವರಿಗೆ ಅನ್ಯಾಯ ಆಗಬಾರದು ಎಂದು ಹೇಳಿದರು.