ಬೆಳಗಾವಿ:ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿ ಸರ್ಕಾರದ ನಿಲುವು ಸರಿಯಾಗಿಲ್ಲ. ಅದಕ್ಕಾಗಿಯೇ ಮುಷ್ಕರ ಮುಂದುವರೆದಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಸಕಾಲದಲ್ಲಿ ಸಮಸ್ಯೆ ಬಗೆಹರಿಸಿದ್ದರೆ ಮುಷ್ಕರ ನಡೆಯುತ್ತಿರಲಿಲ್ಲ: ರಾಮಲಿಂಗಾರೆಡ್ಡಿ - ಸಾರಿಗೆ ನೌಕರರ ಮುಷ್ಕರ
ಸಾರಿಗೆ ನೌಕರರ ಮುಷ್ಕರ ದುರದೃಷ್ಟಕರ. ಸರ್ಕಾರ ಸಕಾಲದಲ್ಲಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಮುಂದಾಗಿದ್ದರೆ ಮುಷ್ಕರವೇ ಇರುತ್ತಿರಲಿಲ್ಲ. ಈಗ ಚುನಾವಣೆ ಸಮಯದಲ್ಲಿ ಭರವಸೆ ನೀಡಿ ಮತದಾರರನ್ನು ಓಲೈಸಲು ನೋಡುತ್ತಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಸ್ಯೆಯನ್ನು ಯಾವಾಗ ಬಗೆಹರಿಸಬೇಕೋ ಆವಾಗ ಬಗೆಹರಿಸದೇ ಈಗ ಚುನಾವಣೆ ಸಮಯದಲ್ಲಿ ಭರವಸೆ ನೀಡುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ದುರದೃಷ್ಟಕರ. ಸರ್ಕಾರ ಸಕಾಲದಲ್ಲಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಮುಂದಾಗಿದ್ದರೆ ಮುಷ್ಕರವೇ ಇರುತ್ತಿರಲಿಲ್ಲ. ಈಗ ಚುನಾವಣೆ ಸಮಯದಲ್ಲಿ ಭರವಸೆ ನೀಡಿ ಮತದಾರರನ್ನು ಓಲೈಸಲು ನೋಡುತ್ತಿದ್ದಾರೆ. ಸಾರಿಗೆ ಸಚಿವರು, ಮುಖ್ಯಮಂತ್ರಿಗಳ ಹೇಳಿಕೆಗಳನ್ನು ನೋಡಿಯೂ ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.
ಬೆಳಗಾವಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ತೊಡಗಿಸಿಕೊಂಡಿದ್ದಾರೆ. ಶಿವಕುಮಾರ್ ಈಗಾಗಲೇ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಪ್ರಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ನಾಳೆ ಸವದತ್ತಿ, ರಾಮದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದು, ಕಾಂಗ್ರೆಸ್ ಕಡೆಗೆ ಜನರ ಒಲವಿದೆ. ನಮ್ಮ ಗೆಲುವು ನಿಶ್ಚಿತ ಎಂದರು.