ಕರ್ನಾಟಕ

karnataka

ETV Bharat / state

ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ - ಖಾಸಗಿ ದೇವಸ್ಥಾನ ಸ್ವಾಧೀನ

ವಿಧಾನಪರಿಷತ್ ಪಡಸಾಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮಾಧ್ಯಮಗಳಲ್ಲಿ ಬಂದ ಸುದ್ದಿ ನೋಡಿದ್ದೇನೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ದೇವಸ್ಥಾನಗಳನ್ನ ನೋಂದಣಿ ಮಾಡಿಕೊಳ್ಳಬೇಕು ಅಂತ 2015 ರಲ್ಲಿ ಧಾರ್ಮಿಕ ದತ್ತಿ ಕಾಯಿದೆ ತಿದ್ದುಪಡಿ ತರಲಾಗಿದೆ. ಇದರ ಅರ್ಥ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಹಕ್ಕು ಚಲಾಯಿಸುವುದು. ನಿಗಾ ಇಡೋದು, ಸ್ವಾಯತ್ತ ತೆಗೆದುಕೊಳ್ಳುವುದಲ್ಲ ಎಂದರು.

ಕೋಟಾ ಶ್ರೀನಿವಾಸ ಪೂಜಾರಿ
ಕೋಟಾ ಶ್ರೀನಿವಾಸ ಪೂಜಾರಿ

By

Published : Feb 5, 2021, 4:56 AM IST

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಹೊರಗಿರುವ ಖಾಸಗಿ ಸುತ್ತೋಲೆಯಿಂದ ಖಾಸಗಿ ದೇವಸ್ಥಾನದವರು ಆತಂಕ ಪಡುವ ಅಗತ್ಯ ಇಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ವಿಧಾನಪರಿಷತ್ ಪಡಸಾಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮಾಧ್ಯಮಗಳಲ್ಲಿ ಬಂದ ಸುದ್ದಿ ನೋಡಿದ್ದೇನೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ದೇವಸ್ಥಾನಗಳು ನೋಂದಣಿ ಮಾಡಿಕೊಳ್ಳಬೇಕು ಅಂತ 2015ರಲ್ಲಿ ಧಾರ್ಮಿಕ ದತ್ತಿ ಕಾಯಿದೆ ತಿದ್ದುಪಡಿ ತರಲಾಗಿದೆ. ಇದರ ಅರ್ಥ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಹಕ್ಕು ಚಲಾಯಿಸುವುದು. ನಿಗಾ ಇಡೋದು, ಸ್ವಾಯತ್ತ ತೆಗೆದುಕೊಳ್ಳುವ ಯಾಬುದೇ ಉದ್ದೇಶವಿಲ್ಲ ಎಂದರು.

ಕೋಟಾ ಶ್ರೀನಿವಾಸ ಪೂಜಾರಿ

ನೋಂದಣಿ ಪ್ರಕ್ರಿಯೆಯ ನೆನಪಿನ ಸುತ್ತೋಲೆ ಕೊಟ್ಟಿದ್ದೇವೆ. ಖಾಸಗಿ ದೇವಸ್ಥಾನ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗ ಇಲ್ಲ. ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆ ಯೇ ಇಲ್ಲ, ಆತಂಕ ಬೇಡ. 2011ರಲ್ಲಿ ಕಾಯಿದೆ ತಂದಿರುವುದು 2015 ರಲ್ಲಿ ಜಾರಿ ಮಾಡಿದ್ದಾರೆ. 2016,17,18,19,20 ರಲ್ಲಿ ನೆನಪಿನ ಸುತ್ತೋಲೆ ಕೊಡುತ್ತಾ ಬಂದಿದ್ದೇವೆ. ಮೊನ್ನೆ ಸಹ ಅಂತಹದೇ ಸುತ್ತೋಲೆ ಕೊಟ್ಟಿದ್ದೇವೆ ಎಂದರು.

ನನ್ನ ಗಮನಕ್ಕೆ ಬಾರದೇ ಇದು ರೆಗ್ಯುಲರ್ ಪ್ರೋಸಸ್‌ ರೀತಿ ಸುತ್ತೋಲೆ ಹೋಗಿರುತ್ತೆ. ಖಾಸಗಿ ದೇವಸ್ಥಾನಗಳ ಸ್ವಾಧೀನ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ವಾಪಸ್ ತೆಗೆದುಕೊಳ್ಳಬೇಕು ಅಂತ ಯಾರಾದರೂ ಹೇಳಿದ್ರೆ ಪರಿಶೀಲನೆ ಮಾಡ್ತೀವಿ. ಖಾಸಗಿ ದೇವಸ್ಥಾನಗಳು ಖಾಸಗಿಯಾಗಿಯೇ ಮುಂದೆವರೆಯಲಿವೆ ಎಂದು ಭರವಸೆ ನೀಡಿದರು.

ಇದನ್ನು ಓದಿ:ಖಾಸಗಿಯವರ ಖಾತೆಗೆ ಹಣ ವರ್ಗಾವಣೆ ಪ್ರಕರಣ ಸಂಬಂಧ ತಿಂಗಳಲ್ಲಿ ವರದಿ ಪಡೆಯಲಾಗುವುದು: ಆರ್​.ಅಶೋಕ್​​​

ABOUT THE AUTHOR

...view details