ಬೆಳಗಾವಿ:ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ನೀಡಿದ ನಾಲ್ಕು ಸಚಿವ ಸ್ಥಾನ ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಇದೀಗ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ನಗರದ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರಿಂದ ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಯುತ್ತದೆ. ತಾವು ಆಡಳಿತದಲ್ಲಿದ್ದಾಗ ರಾಜ್ಯಕ್ಕೆ ನೀವೆಷ್ಟು ಮಂತ್ರಿ ಸ್ಥಾನ ಕೊಟ್ಟಿದ್ದೀರಿ ಎಂದು ಕಾಂಗ್ರೆಸ್ ನಾಯಕರು ಹೇಳಲಿ ಎಂದು ಕುಟುಕಿದರು.