ಬೆಳಗಾವಿ: ಭೀಕರ ಪ್ರವಾಹಕ್ಕೆ ಸಿಕ್ಕಿ ತತ್ತರಿಸಿದ ಜಿಲ್ಲೆಯ ಸಂತ್ರಸ್ತರಿಗೆ ಸರ್ಕಾರಿ ಇಲಾಖೆ ಅಧಿಕಾರಿಗಳು ₹1.50 ಕೋಟಿ ಮೌಲ್ಯದ ಅಗತ್ಯ ವಸ್ತುಗಳ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಾಗವಾಡ ತಾಲೂಕಿನ ಜುಗುಳ, ಮಂಗಾವತಿ, ಶಾಹಾಪುರ ಗ್ರಾಮಗಳ ಸುಮಾರು 20 ಸಾವಿರ ಸಂತ್ರಸ್ತರಿಗೆ ನೆರವು ನೀಡಲಾಯಿತು. ರಾಜ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳ ಸೇವಾ ಸಂಘ ಹಾಗೂ ಉತ್ತರ ವಲಯ ಪೊಲೀಸ್ ಆಶ್ರಯದಲ್ಲಿ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ್, ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಸೇವಾ ಸಂಘದ ಅಧ್ಯಕ್ಷ ಶಿವಪ್ರಕಾಶ್ ಹಾಗೂ ಬೆಳಗಾವಿ ಉತ್ತರ ವಲಯ ಜಂಟಿ ಆಯುಕ್ತ ಕೆ. ರಾಮನ್, ಮೇಘಣ್ಣವರ ಸೇರಿದಂತೆ ಮತ್ತಿತರರು ಇದ್ದರು.