ಕರ್ನಾಟಕ

karnataka

ETV Bharat / state

ಕೋವಿಡ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ.. ಮಾಜಿ ಶಾಸಕ ರಾಜು ಕಾಗೆ ಆರೋಪ

ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆ ದೊಡ್ಡದಾಗಿದೆ. ಇಲ್ಲಿ ಒಬ್ಬರು ಕೇಂದ್ರ ಸಚಿವರು, ಇಬ್ಬರು ಸಂಸದರು, ನಾಲ್ಕು ಜನ ಸಚಿವರಿದ್ದರೂ ಕೊರೊನಾ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ..

Raju kage
Raju kage

By

Published : Jul 19, 2020, 3:01 PM IST

ಚಿಕ್ಕೋಡಿ :ರಾಜ್ಯದಲ್ಲಿ ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ರಾಜು ಕಾಗೆ ಆರೋಪಿಸಿದರು.

ಈಟಿವಿ ಭಾರತಗೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಸಂಬಂಧ ಈವರೆಗೂ 3,300 ಕೋಟಿ ರೂ.ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸುತ್ತಿರುವ ಸರ್ಕಾರ, ವೆಂಟಿಲೇಟರ್, ಸ್ಯಾನಿಟೈಸರ್, ಪಿಪಿಇ ಕಿಟ್, ಹಾಸಿಗೆ ಬಾಡಿಗೆ ನೆಪದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆಯೇ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯೂ ಹೆಚ್ಚಾಗುತ್ತಿದೆ. ಇದರಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗದೆ ಸಾಯುವಂತಾಗಿದೆ. ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆ ದೊಡ್ಡದಾಗಿದೆ. ಇಲ್ಲಿ ಒಬ್ಬರು ಕೇಂದ್ರ ಸಚಿವರು, ಇಬ್ಬರು ಸಂಸದರು, ನಾಲ್ಕು ಜನ ಸಚಿವರಿದ್ದರೂ ಕೊರೊನಾ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದ ಅವರು, ಅಥಣಿಯಲ್ಲಿ ಉಪಮುಖ್ಯಮಂತ್ರಿಗಳು, ಕಾಗವಾಡ ಕ್ಷೇತ್ರದಲ್ಲಿ ಸಚಿವರಿದ್ದರೂ ಕೂಡ ಎರಡೂ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸೆಂಚ್ಯೂರಿ ಬಾರಿಸಿದ್ದು,12 ಜನರನ್ನು ಬಲಿ ಪಡೆದಿದೆ ಎಂದರು.

ಶನಿವಾರ ಒಂದೇ ದಿನ ಅಥಣಿ ಹಾಗೂ ಕಾಗವಾಡದಲ್ಲಿ 41 ಜನರಿಗೆ ಸೋಂಕು ತಗುಲಿದೆ. ಹಾಗಾದರೆ, ಈ ಸಚಿವರು ಏನು ಮಾಡುತ್ತಿದ್ದಾರೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಸಂಪೂರ್ಣ ವಿಫಲವಾಗಿದ್ದಾರೆ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಆರೋಪಿಸಿದರು.

ABOUT THE AUTHOR

...view details