ಕರ್ನಾಟಕ

karnataka

ETV Bharat / state

ಬೆಳಗಾವಿಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಾಗಿತ್ತು:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ - cm bommai news

ಬೊಮ್ಮಾಯಿ ನೂತನ ಸಂಪುಟ ಕುರಿತಂತೆ ಕೆಲ ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತ ಬೆಳಗಾವಿಗೆ ಎರಡು ಸಚಿವ ಸ್ಥಾನ ಒಲಿದಿದೆ. ಆದರೆ, ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ ಜಿಲ್ಲೆಯೆ ಇನ್ನಷ್ಟು ಸಚಿವ ಸ್ಥಾನ ನೀಡಬೇಕಿತ್ತು ಎಂದಿದ್ದಾರೆ.

http://10.10.50.85//karnataka/05-August-2021/kn-bgm-01-5-cabinet-satish-reaction-7201786_05082021131911_0508f_1628149751_469.jpg
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

By

Published : Aug 5, 2021, 4:36 PM IST

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಕೊಡಬೇಕು, ಆ ಜಿಲ್ಲೆಯಲ್ಲಿ ಎಷ್ಟು ಶಾಸಕರಿದ್ದಾರೆ ಎಂಬುದನ್ನು ಸರ್ಕಾರ ನಡೆಸುವವರು ವಿಚಾರಮಾಡಿ ನಿರ್ಧಾರ ತೆಗೆದುಕೊಳ್ಳಬೇಕು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಇನ್ನೂ ಕೆಲವರಿಗೆ ಸಚಿವ ಸ್ಥಾನ ನೀಡಿದರೇ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕೂಡ ಆಗ್ರಹ ಮಾಡುತ್ತೇವೆ ಎಂದರು.

ಬೊಮ್ಮಾಯಿ ಸಂಪುಟ ಕುರಿತು ಸತೀಶ ಜಾರಕಿಹೊಳಿ ಪ್ರತಿಕ್ರಿಯೆ

ಸರ್ಕಾರದ ಆಡಳಿತಾವಧಿ ಮುಂದಿನ ಕೆಲವೇ ತಿಂಗಳಾಗಿರುವುದರಿಂದ ಮತ್ತೆ ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಸರ್ಕಾರ ಹಾಗೂ ಮುಖ್ಯಮಂತ್ರಿಗಳೇ ಈ ಬಗ್ಗೆ ಉತ್ತರ ಕೊಡಬೇಕು. ವಿರೋಧ ಪಕ್ಷದವರಾಗಿ ನಾವು ಈ ಬಗ್ಗೆ ಮಾತನಾಡಲು ಆಗುವುದಿಲ್ಲ ಎಂದರು.

ಮೊಟ್ಟೆ ಹಗರಣ ತನಿಖೆಯಾಗಲಿ

ಮೊಟ್ಟೆ ಹಗರಣದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಮತ್ತೆ ಮಂತ್ರಿಸ್ಥಾನ ನೀಡಲಾಗಿದೆ. ಅವರು ಮತ್ತಷ್ಟು ಪ್ರಬಲರಾಗಿದ್ದಾರೆ. ಅವರ ಮೇಲಿನ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಬೇಕು ಎಂದರು.

ಜೊಲ್ಲೆ ಅವರು ಸಚಿವರಾಗುವುದಕ್ಕಿಂತ ಮುಂಚೆಯೇ ಜೀರೋ ಟ್ರಾಫಿಕ್​​​​ನಲ್ಲಿ ಆಗಮಿಸಿದ್ದ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಅಧಿಕಾರವನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳುತ್ತಾರೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದರು.

ಓದಿ:ಜಮೀರ್ ನಿವಾಸದ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ABOUT THE AUTHOR

...view details