ಅಥಣಿ: ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್ ಮಾಫಿಯಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜರಗಿಸುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಡ್ರಗ್ ಮಾಫಿಯಾ ನಿಯಂತ್ರಣಕ್ಕೆ ಸರ್ಕಾರದಿಂದ ಕಠಿಣ ಕ್ರಮ: ಡಿಸಿಎಂ ಸವದಿ - ಡ್ರಗ್ ಮಾಫಿಯಾ
ಡ್ರಗ್ ಮಾಫಿಯಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಡ್ರಗ್ ಮಾಫಿಯಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮ: ಡಿಸಿಎಂ ಸವದಿ
ಅಥಣಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಮಾದಕ ವಸ್ತು ಮಾರಾಟದಲ್ಲಿ ಯಾರು, ಎಷ್ಟೇ ದೊಡ್ಡವರ ಪ್ರಭಾವವಿರಲಿ, ಅವರನ್ನು ಸರ್ಕಾರ ಬಿಡುವುದಿಲ್ಲ. ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಪ್ರಕಾರ ಅವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು. ಸಮಾಜ ಘಾತುಕ ಶಕ್ತಿಯನ್ನು ಮಟ್ಟಹಾಕಲು ಸರ್ಕಾರ ಸಿದ್ಧವಾಗಿದೆ ಎಂದರು.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಳಿ ಯಾವ ಮಾಹಿತಿಯಿದೆ ಅದನ್ನು ತನಿಖಾ ಅಧಿಕಾರಿಗಳಿಗೆ ತಿಳಿಸಲಿ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
Last Updated : Aug 31, 2020, 12:33 PM IST