ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆ ನಿಯಮ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ.
ಓದಿ: ಡಿ.22ಕ್ಕೆ 3,021 ಗ್ರಾಪಂಗಳಿಗೆ ಮೊದಲ ಹಂತದ ಚುನಾವಣೆ: 1.50 ಲಕ್ಷಕ್ಕೂ ಹೆಚ್ಚು ನಾಮಪತ್ರ ಸಲ್ಲಿಕೆ
1) ರಾಜಕೀಯ ಪಕ್ಷಗಳು ಸಭೆ-ಸಮಾರಂಭ ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ-ಬ್ಯಾನರ್‌ಗಳನ್ನು ಬಳಸುವಂತಿಲ್ಲ.