ಚಿಕ್ಕೋಡಿ ಉಪವಿಭಾಗದ ದ್ರಾಕ್ಷಿ ಬೆಳೆಗಾರರಲ್ಲಿ ಮನೆಮಾಡಿದ ಆತಂಕ ಚಿಕ್ಕೋಡಿ: ಮಾಂಡೌಸ್ ಚಂಡಮಾರುತದ ಹಿನ್ನೆಲೆ ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಚಿಕ್ಕೋಡಿ ಉಪವಿಭಾಗದ ದ್ರಾಕ್ಷಿ ಬೆಳೆಗಾರರಲ್ಲಿ ಆತಂಕ ಮನೆಮಾಡಿದೆ.
ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ರಾಯಬಾಗ, ಹುಕ್ಕೇರಿ, ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ ಹೆಚ್ಚಾಗಿ ದ್ರಾಕ್ಷಿ ಬೆಳೆ ಬೆಳೆಯಲಾಗಿದೆ. ಆದ್ರೆ, ಇದೀಗ ಮಾಂಡೌಸ್ ಚಂಡಮಾರುತದ ಹಿನ್ನೆಲೆ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಫಸಲಿಗೆ ರೋಗ ತಗುಲಬಹುದು ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ನಿಲ್ಲದ ದ್ರಾಕ್ಷಿ ಬೆಳೆಗಾರರ ಸಂಕಷ್ಟ: ಕೈಗೆ ಬಂದ ತುತ್ತು ಬಾಯಿಗೆ ಬರುವಷ್ಟರಲ್ಲಿ ಕುಸಿದ ಬೆಲೆ
ಮುಂದಿನ ತಿಂಗಳಿನಿಂದ ದ್ರಾಕ್ಷಿ ಕಟಾವು ಪ್ರಾರಂಭವಾಗಲಿದೆ. ಹೀಗಾಗಿ, ಹವಾಮಾನ ವೈಪರಿತ್ಯದಿಂದ ಬೆಳೆ ಮೇಲೆ ಯಾವುದೇ ದುಷ್ಪರಿಣಾಮ ಬೀರಬಾರದೆಂದು ದ್ರಾಕ್ಷಿ ಬೆಳೆಗಾರರು ದುಬಾರಿ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ.
ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಕಡಲೆ ಬೆಳೆ ಹೇರಳವಾಗಿ ಬೆಳೆಯುತ್ತಾರೆ. ಆದರೆ ಅಕಾಲಿಕ ಮಳೆ, ಮೋಡ ಕವಿದ ವಾತಾವರಣದಿಂದ ಬೆಳೆಗೆ ಕೀಟಭಾದೆ ಜೊತೆಗೆ ಇಳುವರಿ ಕುಂಠಿತವಾಗುತ್ತದೆ ಎಂದು ಅನ್ನದಾತರು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೊಪ್ಪಳ: ಅಕಾಲಿಕ ಮಳೆ - ಮುಂದುವರಿದ ಚಳಿ - ರೈತರ ಪಾಲಿಗೆ ಹುಳಿಯಾದ ದ್ರಾಕ್ಷಿ..!