ಅಥಣಿ: ಕಕಮರಿ-ಕೋಟ್ಟಲಗಿ (ಅಮಜೇಶ್ವರಿ) ಏತ ನೀರಾವರಿ ಯೋಜನೆ ಕಾಮಗಾರಿಗೆ ಶೀಘ್ರವೇ ಭೂಮಿ ಪೂಜೆ ನೆರವೇರಿಸದಿದ್ದರೆ, ಪಂಚಮಸಾಲಿ ಜಗದ್ಗುರುಗಳ ನೇತೃತ್ವದಲ್ಲಿ ಹಾಗೂ ಅಥಣಿ ಜನರ ಜೊತೆಯಾಗಿ ಸರ್ಕಾರ ವಿರುದ್ಧ ಹೋರಾಟ ಮಾಡಲಾಗುವುದೆಂದು ವೀರಶೈವ ಪಂಚಮಸಾಲಿ ಮಠದ ಹಿರಿಯ ಜಗದ್ಗುರು ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಅಮಜೇಶ್ವರಿ ಏತ ನೀರಾವರಿ ಯೋಜನೆ ಶಿಲಾನ್ಯಾಸ ನೆರವೇರಿಸದಿದ್ದರೆ ಹೋರಾಟ: ಹರಿಹರ ಜಗದ್ಗುರು - ಅಥಣಿ ನೀರವಾರಿ ಸುದ್ದಿ
ಅಮಜೇಶ್ವರಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಶೀಘ್ರವೇ ಭೂಮಿ ಪೂಜೆ ನೆರವೇರಿಸಬೇಕು ಎಂದು ವೀರಶೈವ ಪಂಚಮಸಾಲಿ ಸಮುದಾಯದ ಹಿರಿಯ ಜಗದ್ಗುರು ಸಿದ್ಧಲಿಂಗ ಸ್ವಾಮೀಜಿ ಅವರು ಒತ್ತಾಯಿಸಿದರು.
ವೀರಶೈವ ಪಂಚಮಸಾಲಿ ಹಿರಿಯ ಜಗದ್ಗುರು ಸಿದ್ಧಲಿಂಗ ಸ್ವಾಮೀಜಿ
ಅಥಣಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಪಂಚಮಸಾಲಿ ಸಮಾಜ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಅಥಣಿಯ ಪ್ರಭಾವಿ ರಾಜಕಾರಣಿಗಳಾದ ಡಿಸಿಎಂ ಲಕ್ಷ್ಮಣ್ ಸವದಿ, ಶಾಸಕ ಮಹೇಶ್ ಕುಮಟಳ್ಳಿ, ಜಿಲ್ಲೆಯ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಬಗ್ಗೆ ಮುತುವರ್ಜಿ ವಹಿಸಬೇಕು. ಬಯಲು ಸೀಮೆಯ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಆದಷ್ಟು ಬೇಗನೆ ಅಮಜೇಶ್ವರಿ ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ ನೆರವೇರಿಸಿಬೇಕೆಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.