ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಪಟ್ಟಣದ ಸಾರ್ವಜನಿಕರು ಹಾಗೂ ಪುರಸಭೆ ಸಿಬ್ಬಂದಿ ಕಳೆದ ಎರಡು ದಿನಗಳ ಹಿಂದೆ ಚರ್ಚೆ ನಡೆಸಿ ಸೆ.30 ರಿಂದ ಅ.12 ರ ವರೆಗೆ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ.
ಹೆಚ್ಚಾದ ಸೋಂಕಿತರ ಮರಣ ಪ್ರಮಾಣ... ಸ್ವಯಂ ಪ್ರೇರಿತ ಲಾಕ್ಡೌನ್ ಹೇರಿಕೊಂಡ ಹಾರೂಗೇರಿ ಪಟ್ಟಣ - Self-Locked Down
ಹಾರೂಗೇರಿ ಪಟ್ಟಣದಲ್ಲಿ ಕಳೆದ ಒಂದು ತಿಂಗಳಿನಿಂದ ಹತ್ತಾರೂ ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ 12 ದಿನಗಳ ಕಾಲ ಪಟ್ಟಣವನ್ನು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
![ಹೆಚ್ಚಾದ ಸೋಂಕಿತರ ಮರಣ ಪ್ರಮಾಣ... ಸ್ವಯಂ ಪ್ರೇರಿತ ಲಾಕ್ಡೌನ್ ಹೇರಿಕೊಂಡ ಹಾರೂಗೇರಿ ಪಟ್ಟಣ Harugeri Town Self-Locked Down](https://etvbharatimages.akamaized.net/etvbharat/prod-images/768-512-8993511-209-8993511-1601452601836.jpg)
ಹಾರೂಗೇರಿ ಪಟ್ಟಣ ಸ್ವಯಂ ಪ್ರೇರಿತ ಲಾಕ್ ಡೌನ್..
ಹಾರೂಗೇರಿ ಪಟ್ಟಣ ಸ್ವಯಂ ಪ್ರೇರಿತ ಲಾಕ್ ಡೌನ್..
ಹಾರೂಗೇರಿ ಪಟ್ಟಣದಲ್ಲಿ ಕಳೆದ ಒಂದು ತಿಂಗಳಿನಿಂದ ಹತ್ತಾರೂ ಜನ ಕೊರೊನಾ ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ ಇಂದು ಮುಂಜಾನೆಯಿಂದ ಪಟ್ಟಣದಲ್ಲಿ ಎಲ್ಲಿ ನೋಡಿದಲ್ಲಿ ರಸ್ತೆಗಳು ಬಿಕೋ ಎನ್ನುತ್ತಿವೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ. ಆಸ್ಪತ್ರೆ, ಔಷಧಿ ಅಂಗಡಿ, ಹಾಲು ಹೀಗೆ ಅವಶ್ಯಕ ವಸ್ತುಗಳ ಅಂಗಡಿ ಮಾತ್ರ ತೆರೆದಿವೆ.
ಲಾಕ್ ಡೌನ್‌ನಿಂದ ಮಾತ್ರ ಕೊರೊನಾ ಸೋಂಕು ನಿಯಂತ್ರಿಸಲು ಸಾಧ್ಯ ಎಂದು ಸ್ಥಳೀಯರು ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.