ಅಥಣಿ (ಬೆಳಗಾವಿ): ಧ್ವಜಾರೋಹಣ ಸಂದರ್ಭದಲ್ಲಿ ಹಿರಿಯ ಪತ್ರಕರ್ತರೋಬ್ಬರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಸಂಭವಿಸಿದೆ. ಅಬ್ದುಲ್ ರಜಾಕ್ ಅರಳಿಕಟ್ಟಿ (85) ಮೃತ ಪತ್ರಕರ್ತ.
ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಅಬ್ದುಲ್ ರಜಾಕ್ ಅವರಿಗೆ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಅಲ್ಲೇ ಪಕ್ಕದಲ್ಲಿದ್ದ ಸ್ಥಳೀಯರು ನೋಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ತೀವ್ರ ಹೃದಯಾಘಾತ ಆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.