ಚಿಕ್ಕೋಡಿ :ನಿನ್ನೆ (ಆ.4) ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಿಪ್ಪಾಣಿ ನಗರದ ರಸ್ತೆಗಳು ಜಲಾವೃತಗೊಂಡಿವೆ. ಒಳಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿಯಿತ್ತಿದ್ದು, ದುರ್ನಾತ ಬೀರುತ್ತಿದೆ.
ಚಿಕ್ಕೋಡಿಯಲ್ಲಿ ಧಾರಾಕಾರ ಮಳೆ, ರಸ್ತೆಗಳು ಜಲಾವೃತ
ನದಿ ತೀರದಲ್ಲಿ ನಿನ್ನೆ ರಾತ್ರಿಯಿಂದ ಮಳೆ ಸುರಿಯುತ್ತಿದೆ. ನದಿ ನೀರಿನ ಹರಿವು ಹೆಚ್ಚಾಗಿದೆ. ಈಗಾಗಲೇ ರಾಜಾಪೂರದಿಂದ ಹಾಗೂ ದೂದಗಂಗಾ ನದಿಯಿಂದ 48 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ..
ಜಿಲ್ಲೆಯ ನಿಪ್ಪಾಣಿ ನಗರದ ಕೆಎಲ್ಇ ಕಾಲೇಜು ಪ್ರದೇಶ, ಶಾಹುನಗರ, ಪ್ರತಿಭಾನಗರ ಸೇರಿ ಅನೇಕ ಕಡೆ ಮಳೆ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ 4ರ ಅಂಡರ್ ಪಾಸ್ನಲ್ಲಿಯೂ ನೀರು ನಿಂತಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ ತೀರದ ಜನರು ಆತಂಕದಲ್ಲಿದ್ದಾರೆ. ಈಗಾಗಲೇ ಚಿಕ್ಕೋಡಿ ಉಪವಿಭಾಗದ ಕೃಷ್ಣಾ, ವೇದಗಂಗಾ, ದೂದಗಂಗಾ ನದಿಗೆ ಅಡ್ಡಲಾಗಿರುವ ಏಳು ಸೇತುವೆ ಜಲಾವೃತಗೊಂಡಿವೆ.
ನದಿ ತೀರದಲ್ಲಿ ನಿನ್ನೆ ರಾತ್ರಿಯಿಂದ ಮಳೆ ಸುರಿಯುತ್ತಿದೆ. ನದಿ ನೀರಿನ ಹರಿವು ಹೆಚ್ಚಾಗಿದೆ. ಈಗಾಗಲೇ ರಾಜಾಪೂರದಿಂದ ಹಾಗೂ ದೂದಗಂಗಾ ನದಿಯಿಂದ 48 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ನದಿ ತೀರದ ಜನರು ಆತಂಕದಲ್ಲಿದ್ದಾರೆ.