ಚಿಕ್ಕೋಡಿ: ವಾಡಿಕೆಯಂತೆ ಮುಂಗಾರು ಮಳೆ ಈ ಸಲ ಪ್ರಾರಂಭವಾಗದಿದ್ದರೂ ರಾಜ್ಯದ ಗಡಿ ಭಾಗದಲ್ಲಿ ಬಿತ್ತನೆ ಕಾರ್ಯ ಚುರುಕಾಗಿದೆ. ಕಳೆದ ಎರಡು ದಿನದಿಂದ ಭಾರಿ ಮಳೆ ಸುರಿಯುತ್ತಿದ್ದು, ರೈತರು ಹೊಲಗಳತ್ತ ಮುಖ ಮಾಡಿದ್ದಾರೆ.
ಚಿಕ್ಕೋಡಿ, ಅಥಣಿ, ರಾಯಬಾಗ, ಗೋಕಾಕ್, ಕಾಗವಾಡ ಮತ್ತು ಹುಕ್ಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ವಾಡಿಕೆಯಂತೆ 97.05 ಮಿ.ಮೀ. ಮಳೆ ನಿರೀಕ್ಷೆ ಮಾಡಲಾಗಿತ್ತು. ಆದರೆ, ಶೇ. 25ರಷ್ಟು ಮಾತ್ರ ಮಳೆಯಾಗಿದ್ದು, ರೈತರು ಬಿತ್ತನೆಗೆ ಮುಂದಾಗಿರಲಿಲ್ಲ. ಕಳೆದೆರಡು ದಿನಗಳಲ್ಲಿ ಭಾರಿ ಮಳೆ ಬಿದ್ದ ಪರಿಣಾಮ ರೈತರು ಹೊಲಗಳತ್ತ ಮುಖ ಮಾಡಿದ್ದಾರೆ.