ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದ ಘಟ್ಟ ಪ್ರದೇದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾಗೂ ನದಿ ತೀರದಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮೆಳೆಯಾಗುತ್ತಿರುವ ಪರಿಣಾಮ ಚಿಕ್ಕೋಡಿ ಉಪ ವಿಭಾಗದಲ್ಲಿ ಎರಡು ಸೇತುವೆಗಳು ಜಲಾವೃತಗೊಂಡಿವೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆ... ಚಿಕ್ಕೋಡಿಯ 2 ಸೇತುವೆಗಳು ಸಂಪೂರ್ಣ ಜಲಾವೃತ
ಬೆಳಗಾವಿ ಸೇರಿದಂತೆ ಚಿಕ್ಕೋಡಿ ಭಾಗದಲ್ಲಿ ಮಳೆಯಾಗುತ್ತಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯ ದೂಧಗಂಗಾ ನದಿಯ ಒಳಹರಿವು ಹೆಚ್ಚಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆ...ಚಿಕ್ಕೋಡಿಯ 2 ಸೇತುವೆ ಸಂಪೂರ್ಣ ಜಲಾವೃತ
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಯ ಒಳಹರಿವಿನ ಪ್ರಮಾಣ ಹೆಚ್ಚಳವಾದ ಪರಿಣಾಮ ಕಾರದಗಾ ಭೋಜ ಹಾಗೂ ಕುನ್ನೂರು-ಬಾರವಾಡ ಸೇತುವೆಗಳು ಜಲಾವೃತಗೊಂಡಿವೆ.
ಈಗಾಗಲೇ ಕೃಷ್ಣಾ ನದಿಗೆ 45 ಸಾವಿರಕ್ಕಿಂತ ಹೆಚ್ಚು ಕ್ಯೂಸೆಕ್ ನೀರು ಒಳಹರಿವಿನ ಪ್ರಮಾಣವಿದೆ. ದೂಧಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ.