ಕರ್ನಾಟಕ

karnataka

ETV Bharat / state

ಮೈದುಂಬಿ ಹರಿಯುತ್ತಿರುವ ನದಿಗಳು: ಮುಳುಗಡೆ ಭೀತಿಯಲ್ಲಿ ಸೇತುವೆಗಳು - heavy rainfall in karnataka

ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಸೇತುವೆಗಳು ಮುಳುಗಡೆಯಾಗುವ ಸಾಧ್ಯತೆ ಇದ್ದು, ಆಯಾ ಜಿಲ್ಲಾ ಡಿಸಿಗಳಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಚಿಕ್ಕೋಡಿ

By

Published : Jul 30, 2019, 11:02 AM IST

ಚಿಕ್ಕೋಡಿ: ಕಳೆದ ಎರಡು ದಿನಗಳಿಂದ ಮುಂದುವರೆದ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ಹಾಗಾಗಿ ನದಿ ತೀರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಕೃಷ್ಣೆಯ ಉಗಮ ಸ್ಥಾನ ಮಹಾಬಲೇಶ್ವರ ಸೇರಿದಂತೆ ನೆರೆಯ ಮಹಾರಾಷ್ಟ್ರದ ನದಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆರಾಯನ ಆರ್ಭಟ ಆರಂಭವಾಗಿದೆ. ಪ್ರಸಕ್ತ ಮಳೆಗಾಲದಲ್ಲಿ ಎರಡನೇ ಬಾರಿಗೆ ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳು ಮತ್ತೆ ಮೈದುಂಬಿ ಹರಿಯುತ್ತಿವೆ. ಮೂರು ಸೇತುವೆಗಳು ಮುಳುಗಡೆಯಾಗಿದ್ದು, ಕೆಳಮಟ್ಟದ ಇನ್ನೂ ಮೂರು ಸೇತುವೆಗಳು ಮುಳುಗಡೆ ಭೀತಿಯಲ್ಲಿವೆ.

ಮೈದುಂಬಿ ಹರಿಯುತ್ತಿರುವ ನದಿಗಳು
ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರೋ ತಾಲೂಕಿನ ಕಲ್ಲೋಳ ಯಡೂರ, ದೂಧ್‌ಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ–ಭೋಜ್‌ ಮಲಿಕವಾಡ–ದತ್ತವಾಡ ಗ್ರಾಮಗಳ ನಡುವಿನ ಕೆಳಮಟ್ಟದ ಸೇತುವೆಗಳು ಮುಳುಗಡೆಯಾಗಿವೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಜತ್ರಾಟ–ಭೀವಶಿ, ಅಕ್ಕೋಳ–ಸಿದ್ನಾಳ, ಭೋಜವಾಡಿ–ಕುನ್ನೂರ ಗ್ರಾಮಗಳ ಕೆಳಮಟ್ಟದ ಸೇತುವೆಗಳೂ ಜಲಾವೃತಗೊಳ್ಳುವ ಹಂತದಲ್ಲಿವೆ. ನದಿ ತೀರದ ಗ್ರಾಮಸ್ಥರಿಗೆ ನದಿಗಳಿಗೆ ಇಳಿಯದಂತೆ ಚಿಕ್ಕೋಡಿ ತಹಶೀಲ್ದಾರ ಸಂತೋಷ ಬಿರಾದರ ಮುನ್ನೆಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details