ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆ: ಚಿಕ್ಕೋಡಿ ಉಪವಿಭಾಗದ 6 ಸೇತುವೆಗಳು ಮುಳುಗಡೆ - ಮಹಾರಾಷ್ಟ್ರ ಮಳೆ ನ್ಯೂಸ್​

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ದೂಧಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಮಹಾ ಮಳೆಯಿಂದ ಕೃಷ್ಣೆಗೆ 62 ಸಾವಿರ ಕ್ಯೂಸೆಕ್‌ನಷ್ಟು ಒಳ ಹರಿವು ಹೆಚ್ಚಳವಾಗಿದ್ದು, ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಮುಳುಗಡೆಯಾಗಿವೆ ಎಂದು ಚಿಕ್ಕೋಡಿ ಉಪ-ವಿಭಾಗೀಯ ಅಧಿಕಾರಿ ರವೀಂದ್ರ ಕರಲಿಂಗಣ್ಣವರ ತಿಳಿಸಿದ್ದಾರೆ.

Heavy rains in Konkan region of Maharashtra: 6 bridges in Chikkodi subdivision
ಮಹಾರಾಷ್ಟ್ರದ ಕೋಂಕಣ ಪ್ರದೇಶಗಳಲ್ಲಿ ಭಾರಿ ಮಳೆ: ಚಿಕ್ಕೋಡಿ ಉಪವಿಭಾಗದ 6 ಸೇತುವೆಗಳು ಜಲಾವೃತ

By

Published : Jul 9, 2020, 12:38 PM IST

Updated : Jul 9, 2020, 2:18 PM IST

ಚಿಕ್ಕೋಡಿ(ಬೆಳಗಾವಿ):ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ದೂಧಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

ಮಹಾ ಮಳೆಯಿಂದ ಕೃಷ್ಣೆಗೆ 62 ಸಾವಿರ ಕ್ಯೂಸೆಕ್‌ನಷ್ಟು ಒಳ ಹರಿವು ಹೆಚ್ಚಳವಾಗಿದ್ದು, ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಮುಳುಗಡೆಯಾಗಿವೆ ಎಂದು ಚಿಕ್ಕೋಡಿ ಉಪ-ವಿಭಾಗೀಯ ಅಧಿಕಾರಿ ರವೀಂದ್ರ ಕರಲಿಂಗಣ್ಣವರ ಮಾಹಿತಿ ನೀಡಿದ್ದಾರೆ.

'ಮಹಾ' ಮಳೆಯಿಂದ ಚಿಕ್ಕೋಡಿ ಉಪವಿಭಾಗದ 6 ಸೇತುವೆಗಳು ಜಲಾವೃತ

ದೂಧಗಂಗಾ ನದಿಗೆ ನಿರ್ಮಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಮುಳುಗಡೆಯಾಗಿವೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಜೊತೆಗೆ ನದಿ ತೀರದಲ್ಲೂ ಸಹಿತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಇದರಿಂದ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ.

Last Updated : Jul 9, 2020, 2:18 PM IST

ABOUT THE AUTHOR

...view details