ಬೆಳಗಾವಿ :ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಾಗ್ತಿರುವ ಹಿನ್ನೆಲೆಯಲ್ಲಿ ಅಪಾಯದ ಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದ್ದು, ರಾಮದುರ್ಗ ತಾಲೂಕಿನ ಹಲವು ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ .. ಸುನ್ನಾಳ ಗ್ರಾಮ ಮುಳುಗಡೆ - Western Ghats
ಭಾರಿ ಮಳೆ ಹಿನ್ನಲೆಯಲ್ಲಿ ಅಪಾಯದ ಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದ್ದು, ರಾಮದುರ್ಗ ತಾಲೂಕಿನ ಹಲವು ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.
ಮಲಪ್ರಭಾ ನದಿ
ಭಾರಿ ಪ್ರವಾಹದಿಂದಾಗಿ ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದ ಒಳಗೆ ನೀರು ಬಂದಿದ್ದು, ಮತ್ತೊಮ್ಮೆ ಗ್ರಾಮ ಮುಳುಗುವ ಆತಂಕದಲ್ಲಿ ಜನರು ತಾವಾಗಿಯೇ ಊರು ತೊರೆಯುತ್ತಿದ್ದಾರೆ. ಇತ್ತ ಪರಿಹಾರ ಕೇಂದ್ರ ತೆರೆದು ಗ್ರಾಮಸ್ಥರ ಸ್ಥಳಾಂತರಕ್ಕೆ ತಾಲೂಕು ಆಡಳಿತ ಮುಂದಾಗಿದೆ.