ಅಥಣಿ :ದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸರ್ಕಾರ ಇವುಗಳ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಬೇಕು. ಇಲ್ಲವಾದರೆ ನಾವು ಮುಂದೊಂದು ದಿನ ಹಿಂದೂ ಜಿಹಾದ್ ಪ್ರಾರಂಭ ಮಾಡಬೇಕಾಗುತ್ತದೆ ಎಂದು ಆರ್ಎಸ್ಎಸ್ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಹೇಳಿದರು.
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಬಜರಂಗದಳ ಸಂಘಟನೆಗಳು ಜೊತೆಯಾಗಿ ಶಿವಾಜಿ ಸರ್ಕಲ್ನಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪಾದಯಾತ್ರೆ ಮಾಡುವ ಮೂಲಕ ಹರ್ಷ ಹತ್ಯೆಯನ್ನು ಖಂಡಿಸಿದರು. ಇದೇ ವೇಳೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮೂಲಕ ರಾಜ್ಯ ಸರ್ಕಾರಕ್ಕೆ ಸಂಘಟನೆಗಳು ಮನವಿ ಪತ್ರವನ್ನು ಸಲ್ಲಿಸಿದರು.
ಕೊಲೆಯಾದ ಯುವಕ ಹರ್ಷ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷ ನೀಡಬೇಕು. ಮುಂದೆ ಯಾವುದೇ ಹಿಂದೂ ಯುವಕನ ಮೇಲೆ ಈ ರೀತಿ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ, ಇವುಗಳಿಗೆ ಕಡಿವಾಣ ಬಿಳ್ಳದಿದ್ದರೆ ನಾವು ಕೂಡ ಮುಂದೊಂದು ದಿನ ಹಿಂದೂ ಜಿಹಾದ್ ಜಾರಿ ಮಾಡುವ ಸನ್ನಿವೇಶ ನಿರ್ಮಾಣ ಮಾಡಿಕೊಡಬೇಡಿ ಎಂದು ಆರ್ಎಸ್ಎಸ್ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಹೇಳಿದರು.