ಬೆಳಗಾವಿ:ನಗರದ ಮಾಂಸಾಹಾರಿ ಹೋಟೆಲ್ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ನಲ್ಲಿ ಸಾಧು-ಸಂತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿರುವ ಹಿಂದೂ ಪರ ಸಂಘಟನೆಗಳು ಸಂಬಂಧಿಸಿದ ಹೋಟೆಲ್‌ನವರು 24 ಗಂಟೆಯೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿವೆ.
ಮಾಂಸಾಹಾರಿ ಹೋಟೆಲ್ನಿಂದ ಸಾಧು-ಸಂತರಿಗೆ ಅಪಮಾನ ಆರೋಪ: ಹಿಂದೂ ಸಂಘಟನೆಗಳ ಆಕ್ರೋಶ - ಬೆಳಗಾವಿ ಸಾಧು ಸಂತರ ಸುದ್ದಿ
ಮಾಂಸಾಹಾರಿ ಹೋಟೆಲ್ನಿಂದ ಸಾಧು-ಸಂತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳು, ಸಂಬಂಧಿಸಿದ ಹೋಟೆಲ್‌ನವರು 24 ಗಂಟೆಯೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ಹೋಟೆಲ್ನಿಂದ ಸಾಧು-ಸಂತರಿಗೆ ಅಪಮಾನ
ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ ಮುಂದಾಗುವ ಅನಾಹುತಕ್ಕೆ ಹೋಟೆಲ್‌ನವರೇ ಹೊಣೆ ಆಗಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಡಿಸಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿರುವ ಕಾರ್ಯಕರ್ತರು ಹೋಟೆಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಿವಾದಿತ ಜಾಹೀರಾತಿನ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಗರಂ ಆಗುತ್ತಿದ್ದಂತೆ ಹೋಟೆಲ್ ಬಂದ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಹೋಟೆಲ್ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.