ಬೆಳಗಾವಿ: ಬೆಳಗಾವಿ ಸಂಘಟನಾತ್ಮಕ ಮೂರು ಜಿಲ್ಲೆಯ ಪದಾಧಿಕಾರಿಗಳ ಸಭೆ ಮುಕ್ತಾಯಗೊಂಡಿದ್ದು, ಜೀರಗೆ ಸಭಾಭವನದಿಂದ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ಅಲ್ಲಿಂದ ತೆರಳಿದ್ದಾರೆ.
ಅಮಿತ್ ಶಾ ಮಹತ್ವದ ಸಭೆ ಮುಕ್ತಾಯ: 7:45ಕ್ಕೆ ಬೆಳಗಾವಿಯಿಂದ ದೆಹಲಿಗೆ ಹಾರಲಿರುವ ಚಾಣಕ್ಯ - ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟ ಅಮಿತ್ ಶಾ
18:23 January 17
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಬೆಳಗಾವಿಯ ಸಭಾಭವನದಲ್ಲಿ ಸಭೆ ನಡೆಸಿ ಸಂಜೆ 7:45 ಕ್ಕೆ ಬೆಳಗಾವಿಯಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇನ್ನು ಸಭೆ ಮುಗಿಸಿದ ಶಾ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಹೊರಟಿದ್ದಾರೆ. 7:45 ಕ್ಕೆ ಬೆಳಗಾವಿಯಿಂದ ದೆಹಲಿಗೆ ಅಮಿತ್ ಶಾ ತೆರಳಲಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಳಗಾವಿಯಿಂದ ದೆಹಲಿಗೆ ಗೃಹ ಸಚಿವರು ಪ್ರಯಾಣ ಬೆಳೆಸಲಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಬಿಎಸ್ ವೈ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಚಾಣಕ್ಯನಿಗೆ ಬೀಳ್ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ:ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ; ಯಡಿಯೂರಪ್ಪ