ಬೆಳಗಾವಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರತಿಷ್ಠಿತ ಹೋಟೆಲ್‌ಗಳು ಹಾಗೂ ಪಂಚತಾರಾ ರೆಸಾರ್ಟ್ಗಳಲ್ಲಿ ಭದ್ರತಾ ಪರಿಶೀಲನೆ ನಡೆಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಹೋಟೆಲ್‌ಗಳು ಹಾಗೂ ರೆಸಾರ್ಟ್ಗಳು ಪರವಾನಗಿ ಪಡೆಯುವ ಪೂರ್ವದಲ್ಲಿ ವಿಧಿಸಲಾದ ರಕ್ಷಣಾ ಸಂಬಂಧಿತ ನಿಯಮಾವಳಿಗಳನ್ನು ಪಾಲಿಸುತ್ತಿವೆಯೇ? ಎಂಬುದರ ಬಗ್ಗೆ ಪರಿಶೀಲನೆ ಆಗಬೇಕಿದೆ.
ಹೋಟೆಲ್, ರೆಸಾರ್ಟ್ಗಳಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲಿಸುವಂತೆ ಡಿಜಿ,ಐಜಿಪಿಗೆ ಸಚಿವ ಆರಗ ಸೂಚನೆ - chandarashekar guruji murder case
ಚಂದ್ರಶೇಖರ ಗುರೂಜಿ ಹತ್ಯೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಹೋಟೆಲ್‌ಗಳು ಹಾಗೂ ರೆಸಾರ್ಟ್ಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.
ಹೋಟೆಲ್,ರೆಸಾರ್ಟ್ಗಳಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲಿಸುವಂತೆ ಸೂಚಿಸಿದ ಆರಗ ಜ್ಞಾನೇಂದ್ರ
ಯಾವುದಾದರೂ ಹೋಟೆಲ್ ಅಥವಾ ಪ್ರತಿಷ್ಠಿತ ರೆಸಾರ್ಟ್ ರಕ್ಷಣೆಯ ಸಂಬಂಧ ನಿಯಮಗಳನ್ನು ಪಾಲಿಸಲು ವಿಫಲವಾಗಿದ್ದರೆ ಅಗತ್ಯ ಕಾನೂನು ಕ್ರಮ ಜರುಗಿಸುವಂತೆ ನಿರ್ದೇಶಿಸಲಾಗಿದೆ. ಹೋಟೆಲ್ ವ್ಯವಸ್ಥಾಪಕರು ತಮ್ಮ ಅತಿಥಿಗಳಿಗೆ ಸರಿಯಾದ ರಕ್ಷಣಾ ವ್ಯವಸ್ಥೆ ಒದಗಿಸದೇ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ.. ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಜೀವನ ಹೀಗಿತ್ತು