ಬೆಳಗಾವಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ, ಜೋರು ಗಾಳಿಗೆ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಜ್ಜಿ- ಮೊಮ್ಮಗ ಮೃತಪಟ್ಟಿರುವ ಘಟನೆ ಇಟಗಿ ಗ್ರಾಮದಲ್ಲಿ ನಡೆದಿದೆ.
ಖಾನಾಪುರ ತಾಲೂಕಿನ ಇಟಗಿ ಗ್ರಾಮದ ದೊಡ್ಡವ್ವ ಪಟ್ಟೇದ (55), ಮೊಮ್ಮಗ ಅಭಿಷೇಕ ಪಟ್ಟೇದ (3) ಮೃತರು. ನಿನ್ನೆ ರಾತ್ರಿಯಿಂದ ಗ್ರಾಮದಲ್ಲಿ ಸುರಿದ ಜೋರುಗಾಳಿ, ಮಳೆಗೆ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ದೊಡ್ಡವ್ವರ ಮಗನಾದ ಸುರೇಶ್ ಮತ್ತು ಸೊಸೆ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದಾರೆ.