ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಫೆಬ್ರವರಿ 8ರಂದು ನಡೆಯಲಿದ್ದು, ಇಸ್ರೋ ಅಧ್ಯಕ್ಷ ಡಾ. ಕೆ.ಶಿವನ್ ಅವರಿಗೆ ಗೌರವ ಡಾಕ್ಟರ್ ಆಫ್ ಸೈನ್ಸ್ ಪದವಿ ಪ್ರದಾನ ಮಾಡಲಿದ್ದೇವೆ ಎಂದು ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕರಿಸಿದ್ದಪ್ಪ ತಿಳಿಸಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 19ನೇ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ. ಕೆ.ಕೆ.ಅಗರವಾಲ್ ಹಾಗೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಬಿಇ ವಿಭಾಗದಲ್ಲಿ 58,827, ಬಿ.ಆರ್ಕ್ ವಿಭಾಗದಲ್ಲಿ 744, ಎಂಬಿಎ ವಿಭಾಗದಲ್ಲಿ 4,606, ಎಂಸಿಎ ವಿಭಾಗದಲ್ಲಿ 1,325, ಎಂ.ಟೆಕ್ ವಿಭಾಗದಲ್ಲಿ 1582, ಎಂ.ಆರ್ಕ್ ವಿಭಾಗದಲ್ಲಿ 39, ಪಿಹೆಚ್ಡಿ ವಿಭಾಗದಲ್ಲಿ 479 ಹಾಗೂ ಎಂಎಸ್ಸಿ ವಿಭಾಗದಲ್ಲಿ 21 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವು ಎಂದರು.