ಚಿಕ್ಕೋಡಿ:ಆಸ್ಪತ್ರೆ ನೆಪ ಹೇಳಿ ಬೈಕ್ ಮೇಲೆ ತಿರುಗಾಡುತ್ತಿರುವ ಬೈಕ್ ಸವಾರರಿಗೆ ಸ್ಥಳದಲ್ಲಿಯೇ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮಾಡಲು ಹುಕ್ಕೇರಿ ತಾಲೂಕಾಡಳಿತ ಮುಂದಾಗಿದೆ.
ಹುಕ್ಕೇರಿ; ಅನಗತ್ಯ ಸುತ್ತಾಡಿದರೆ ಬೈಕ್ ಸೀಜ್, ಸ್ಥಳದಲ್ಲೇ ಕೋವಿಡ್ ಟೆಸ್ಟ್
ಕೊರೊನಾ ಎರಡನೇ ಅಲೆ ತಡೆಗಟ್ಟಲು ಈಗಾಗಲೇ ಸರ್ಕಾರ ಲಾಕ್‌ಡೌನ್ ಮಾಡಿದರೂ ಸಹ ಜನರು ಬೇಕಾಬಿಟ್ಟಿ ತಿರುಗಾಡುತ್ತಿದ್ದಾರೆ. ಬೈಕ್ ಸೀಜ್ ಮಾಡಿದರೂ ಜನ ಬುದ್ದಿ ಕಲಿಯುತ್ತಿಲ್ಲ. ಹಾಗಾಗಿ ಅನಗತ್ಯವಾಗಿ ಹೊರಗಡೆ ಬಂದವರಿಗೆ ಸ್ಥಳದಲ್ಲೇ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ.
ಕೊರೊನಾ ಎರಡನೇ ಅಲೆ ತಡೆಗಟ್ಟಲು ಈಗಾಗಲೇ ಸರ್ಕಾರ ಲಾಕ್‌ಡೌನ್ ಮಾಡಿದರೂ ಸಹ ಜನರು ಬೇಕಾಬಿಟ್ಟಿ ತಿರುಗಾಡುತ್ತಿದ್ದಾರೆ. ಬೈಕ್ ಸೀಜ್ ಮಾಡಿದರೂ ಜನ ಮಾತ್ರ ಬುದ್ದಿ ಕಲಿಯುತ್ತಿಲ್ಲ. ಹಾಗಾಗಿ ಅನಗತ್ಯವಾಗಿ ಹೊರಗಡೆ ಬಂದವರಿಗೆ ಸ್ಥಳದಲ್ಲೇ ರ್ಯಾಪಿಡ್ ಟೆಸ್ಟ್ ಮಾಡಲಾಗುತ್ತಿದೆ.
ಕೋವಿಡ್ ಪಾಸಿಟಿವ್ ಬಂದಲ್ಲಿ ಅಂಥವರನ್ನು ಸರ್ಕಾರಿ ಆಸ್ಪತ್ರೆಗೆ ಕಳಿಸಲಾಗುತ್ತಿದೆ. 500ಕ್ಕೂ ಹೆಚ್ಚು ಬೈಕ್‌ಗಳನ್ನು ಸೀಜ್ ಮಾಡಲಾಗಿದೆ. ಈವರೆಗೂ 21 ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. 5 ಲಕ್ಷಕ್ಕೂ ಅಧಿಕ ದಂಡ ಸಂಗ್ರಹಿಸಲಾಗಿದೆ ಎಂದು ಹುಕ್ಕೇರಿ ತಹಶೀಲ್ದಾರ ಡಿ.ಎಚ್. ಹೂಗಾರ ತಿಳಿಸಿದರು.