ಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿವ ಭಾರಿ ಮಳೆಯಿಂದಾಗಿ ಮನೆಯೊಂದು ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ತಾಲೂಕಿನ ವಡಗಾಂವಿ ಪ್ರದೇಶದಲ್ಲಿ ನಡೆದಿದೆ.
ವಡಗಾವಿಯ ಭಾರತ ನಗರದ ಎಡರನೇ ಕ್ರಾಸ್ನಲ್ಲಿ ಆನಂದ ಕಲ್ಲಪ್ಪ ಬಿರ್ಜೆ ಎಂಬುವವರಿಗೆ ಸೇರಿದ ಮನೆ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ನೆಲಸಮವಾಗಿದೆ. ಮನೆಯಲ್ಲಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಸಂಜೆಯಷ್ಟೇ ಮನೆಯಲ್ಲಿದ್ದ ಏಳು ಜನ ಕುಟುಂಬ ಸದಸ್ಯರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿತ್ತು.