ಕರ್ನಾಟಕ

karnataka

ETV Bharat / state

ಮನೆ ಕುಸಿತಕ್ಕೆ 7 ಜನರ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ - belguam latest news

ಭಾರೀ ಮಳೆಯಿಂದ ಮನೆ ಕುಸಿದ ಪರಿಣಾಮ ಒಂದೇ ಕುಟುಂಬದ 7 ಜನ ಸಾವಿಗೀಡಾಗಿದ್ದು, ಸ್ಥಳಕ್ಕೆ ಶಾಸಕಿ ಹೆಬ್ಬಾಳ್ಕರ್​ ಭೇಟಿ ನೀಡಿದ್ದಾರೆ. ಇನ್ನು ಸಿಎಂ ಕೂಡ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಸಂತಾಪ ಸೂಚಿಸಿದ್ದಾರೆ.

House collapsed in Belagavi distrcit : CM announces Rs 5 lakh compensation
ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

By

Published : Oct 6, 2021, 10:50 PM IST

ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಮನೆ ಕುಸಿತದಿಂದ ಸಂಭವಿಸಿರುವ ಈ ಅನಾಹುತ ದುರದೃಷ್ಟಕರ, ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದು ನನಗೆ ಬಹಳ ದುಃಖ ತಂದಿದೆ. ಮೊದಲಿಗೆ ನಾನು ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಬೊಮ್ಮಾಯಿ ಪ್ರಕಟಣೆ ಹೊರಡಿಸಿದ್ದಾರೆ.

5 ಲಕ್ಷ ರೂಪಾಯಿ ಪರಿಹಾರ ಘೋಷಣೆ

ಇನ್ನು ಬೊಮ್ಮಾಯಿ ಅವರು ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿರುವ ಸಿಎಂ, ತಕ್ಷಣ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ತಿಳಿಸಿದ್ದು, ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ.

ಹಾಗೆ ಬೆಳಗಾವಿ ಡಿಸಿ ಎಂ‌ಜಿ‌ ಹಿರೇಮಠ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿದೆ ಸಿಎಂ ಮಾತನಾಡಿದ್ದು, ಪರಿಹಾರ ಕಾರ್ಯ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ABOUT THE AUTHOR

...view details