ಬೆಳಗಾವಿ:ರೊಟ್ಟಿ ಮಾಡುತ್ತಿದ್ದಾಗ ಮನೆ ಗೋಡೆ ಕುಸಿದು ಬಿದ್ದು ಅವಶೇಷಗಳಡಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಪಟ್ಟಣ ನಿವಾಸಿ ಕಾಳವ್ವ ಕಮ್ಮಾರ ಎಂಬುವವರನ್ನು ಸ್ಥಳೀಯರು ಹರಸಾಹಸಪಟ್ಟು ರಕ್ಷಣೆ ಮಾಡಿದ್ದಾರೆ.
ರೊಟ್ಟಿ ಮಾಡುವಾಗ ಮನೆಗೋಡೆ ಕುಸಿತ: ಅವಶೇಷಗಳಡಿ ಸಿಲುಕಿದ್ದ ಮಹಿಳೆಯ ರಕ್ಷಣೆ.. ವಿಡಿಯೋ! - ಈಟಿವಿ ಭಾರತ ಕನ್ನಡ
ಮನೆಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ.
![ರೊಟ್ಟಿ ಮಾಡುವಾಗ ಮನೆಗೋಡೆ ಕುಸಿತ: ಅವಶೇಷಗಳಡಿ ಸಿಲುಕಿದ್ದ ಮಹಿಳೆಯ ರಕ್ಷಣೆ.. ವಿಡಿಯೋ! house-wall-collasped-at-belagavi](https://etvbharatimages.akamaized.net/etvbharat/prod-images/768-512-16545611-thumbnail-3x2-yyy.jpg)
ಕಳೆದ ನಾಲ್ಕೈದು ದಿನಗಳಿಂದ ಜಿಲ್ಲಾದ್ಯಂತ ಭಾರಿ ಮಳೆ ಆಗುತ್ತಿದ್ದು, ಮಣ್ಣಿನಿಂದ ಕಟ್ಟಿದ ಮನೆಯ ಗೋಡೆ ಏಕಾಏಕಿ ಕುಸಿತ ಕಂಡಿದೆ. ಈ ವೇಳೆ ಮನೆಯಲ್ಲಿ ರೊಟ್ಟಿ ಮಾಡುತ್ತಿದ್ದ ಕಾಳವ್ವ ಮೇಲೆ ಗೋಡೆ ಕುಸಿದು ಬಿದ್ದು ಅವಶೇಷಗಳಡಿ ಸಿಲುಕಿದ್ದರು. ಬಳಿಕ ಅವರನ್ನು ರಕ್ಷಣೆ ಮಾಡಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಕಾಳವ್ವನಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ :ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ: ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವು