ಚಿಕ್ಕೋಡಿ:ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ.
ಹಥ್ರಾಸ್ ಘಟನೆ ಖಂಡಿಸಿ ಹುಕ್ಕೇರಿ ಪಟ್ಟಣ ಬಂದ್ - Hathras case
ಹಥ್ರಾಸ್ನಲ್ಲಿ ನಡೆದ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಹುಕ್ಕೇರಿ ಪಟ್ಟಣವನ್ನು ಬಂದ್ ಮಾಡಿದ್ದಾರೆ.
ಹಥ್ರಾಸ್ ಪ್ರಕರಣ ಖಂಡಿಸಿ ಹುಕ್ಕೇರಿ ಪಟ್ಟಣ ಬಂದ್
ಯುವತಿಯ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಹಾಗೂ ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ.