ಬೆಳಗಾವಿ: ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಪತಿಯೊಬ್ಬ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸವದತ್ತಿ ಪಟ್ಟಣದಲ್ಲಿ ನಡೆದಿದೆ.
ಅಕ್ರಮ ಸಂಬಂಧ ಶಂಕೆ..ಬೆಳಗಾವಿಯಲ್ಲಿ ಪತ್ನಿ ಕೊಲೆ ಮಾಡಿದ ಪತಿ - ಪತ್ನಿ ಕೊಂದ ಪತಿ
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಳಗಾವಿ
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನಿವಾಸಿ ಶಬಾನಾ ಗೊರವನಕೊಳ್ಳ (28)ಕೊಲೆಯಾದ ಮಹಿಳೆ. ಮೆಹಬೂಬಸಾಬ್ ಗರೀಬ್‌ಸಾಬ್ ಗೋರವನಕೊಳ್ಳ(30) ಕೊಲೆ ಮಾಡಿದ ಆರೋಪಿ. ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈಗಾಗಲೇ ಆರೋಪಿ ಮೆಹಬೂಬ್ ಸಾಬ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಖಾಸಗಿ ಕಾಲೇಜು ಅಧ್ಯಕ್ಷನ ಮೇಲೆ ಲೈಂಗಿಕ ಕಿರುಕುಳ ಆರೋಪ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು