ಬೆಳಗಾವಿ:ದಿ. ಸುರೇಶ್ ಅಂಗಡಿಯವರು ಕಂಡ ಕನಸನ್ನು ಪೂರ್ತಿ ಮಾಡುತ್ತೇನೆ. ಕಾರ್ಯಕರ್ತರ ಜೊತೆಗೂಡಿ ಕ್ಷೇತ್ರದ ಅಭಿವೃದ್ಧಿ ಮಾಡುವ ಕೆಲಸ ಮಾಡಿ, ಅಂಗಡಿಯವರ ಹೆಸರು ಉಳಿಸುತ್ತೇನೆ ಎಂದು ದಿ. ಸುರೇಶ ಅಂಗಡಿಯವರ ಪತ್ನಿ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಬೆಳಗಾವಿ ಬೈಎಲೆಕ್ಷನ್ಗೆ ನನಗೆ ಟಿಕೆಟ್ ನೀಡಿದ್ದಕ್ಕಾಗಿ ಬಿಜೆಪಿಯ ಕೇಂದ್ರ ಹಾಗೂ ರಾಜ್ಯದ ಎಲ್ಲ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅದರಂತೆ ನಮ್ಮ ಕುಟುಂಬಕ್ಕೆ ಟಿಕೆಟ್ ನೀಡುವಂತೆ ಆಗ್ರಹಿಸಿದ ಎಲ್ಲ ಕಾರ್ಯಕರ್ತರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.