ಚಿಕ್ಕೋಡಿ: ಪ್ರವಾಹದ ಪರಸ್ಥಿತಿ ಬಗ್ಗೆ ದಿನದಿಂದ ದಿನಕ್ಕೆ ಕಾಗವಾಡ ತಹಶೀಲ್ದಾರ ಮೂಲಕ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಮುಂಜಾಗೃತ ಕ್ರಮವಾಗಿ ಹೆಚ್ಚಿನ ಬೊಟ್‌ಗಳನ್ನು ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಜವಳಿ ಮತ್ತು ಅಲ್ಪಸಂಖ್ಯಾತರ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ಪ್ರವಾಹದ ಪರಿಸ್ಥಿತಿ ಬಗ್ಗೆ ದಿನದಿಂದ ದಿನಕ್ಕೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ: ಶ್ರೀಮಂತ ಪಾಟೀಲ
ಕಾಗವಾಡ ತಾಲೂಕು ಪ್ರವಾಹ ಎದುರಿಸಲು ಸನ್ನದ್ಧವಾಗಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಬೋಟ್‌ಗಳನ್ನು ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಜವಳಿ ಮತ್ತು ಅಲ್ಪಸಂಖ್ಯಾತ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ಕಾಗವಾಡ ತಾಲೂಕಿನ ಕೆಂಪವಾಡದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ ಅಧಿಕಾರಿಗಳ ಜೊತೆಯಲ್ಲಿ ನಾನು ದಿನಂಪ್ರತಿ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಮಳೆ ಪ್ರಮಾಣ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಎಷ್ಟು ನೀರು ಹರಿದು ಬರುತ್ತಿದೆ ಎಂದು ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಈಗ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಗೆ ಮಳೆ ಬೀಳುತ್ತಿದ್ದು ಮಹಾಬಲೇಶ್ವರದಲ್ಲಿ ಹೆಚ್ಚಾಗಿ ಮಳೆಯಾಗುತ್ತಿಲ್ಲ. ಕೊಯ್ನಾ ಈಗ 73% ತುಂಬಿದೆ.
ಈಗಾಗಲೇ ಕೊಲ್ಲಾಪೂರದಲ್ಲಿ ಮಳೆ ಹೆಚ್ಚಾಗಿ ಆಗುತ್ತಿರುವುದರಿಂದ ಈ ನದಿ ನೀರಿನ ಒಳ ಹರಿವಿನಲ್ಲಿ ಹೆಚ್ಚಾಗಿದೆ. ಕಾಗವಾಡ ತಾಲೂಕು ಪ್ರವಾಹ ಎದುರಿಸಲು ಸನ್ನದ್ದವಾಗಿದೆ ಎಂದರು.