ಕರ್ನಾಟಕ

karnataka

ETV Bharat / state

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಪ್ರಕಾಶ ಹುಕ್ಕೇರಿ - prakashhukkeri news

ಡಿ.ಕೆ.ಶಿವಕುಮಾರ್​ ಹಾಗೂ ಸತೀಶ್​ ​ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಹುಕ್ಕೇರಿ ಮನವಿ ಮಾಡಿದ್ದಾರೆ.

I am ready to competition to MLC elections: Prakash Hukkeri
ಮಾಜಿ ಸಂಸದ ಪ್ರಕಾಶ ಹುಕ್ಕೇರಿ

By

Published : Sep 30, 2021, 2:54 PM IST

Updated : Sep 30, 2021, 3:13 PM IST

ಚಿಕ್ಕೋಡಿ: ವಿಧಾನಪರಿಷತ್ ಚುನಾವಣೆಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು.

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಜನಪ್ರತಿನಿಧಿಯಾಗಿ ಜನಸೇವೆ ಮಾಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕನಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ ಎಂದರು.

'ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ'

ಇದನ್ನೂ ಓದಿ:ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಕಾರ್ಯತಂತ್ರಗಳೇನು?

1988ರಲ್ಲಿ ಪರಿಷತ್ ಸದಸ್ಯನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಹಾಗೂ ಸತೀಶ್​ ​ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು. ಪ್ರಕಾಶ್​ ಹುಕ್ಕೇರಿ ಅವರು ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನರೇ ಕೇಳಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

Last Updated : Sep 30, 2021, 3:13 PM IST

ABOUT THE AUTHOR

...view details