ಚಿಕ್ಕೋಡಿ: ಸಂಸದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಪ್ರಮೋದ್ ಮುತಾಲಿಕ್ - Pramod Muthalik, founder of Sri Rama Sena
ಬೆಳಗಾವಿ ಲೋಕಸಭೆಯ ಉಪಚುನಾವಣೆಯಲ್ಲಿ ಬಿಜೆಪಿಯವರು ಮನಸ್ಸು ಮಾಡಿ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಪ್ರಮೋದ್ ಮುತಾಲಿಕ್
ಇದನ್ನೂ ಓದಿ:ದಲಿತರ ಮೇಲಿನ ದೌರ್ಜನ್ಯ ತಡೆ ಕುರಿತು ವಿವಿಗಳಲ್ಲಿ ಸಂಶೋಧನೆಯಾಗಲಿ: ಶ್ರೀರಾಮುಲು
ಹುಕ್ಕೇರಿ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದುತ್ವ ವಿಚಾರಧಾರೆಯ ಧ್ವನಿ ಲೋಕಸಭೆಯಲ್ಲಿ ಇರಬೇಕು ಎಂದು ಕಾರ್ಯಕರ್ತರು, ಹಿತೈಷಿಗಳು ಆಗ್ರಹ ಮಾಡುತ್ತಿದ್ದಾರೆ. ಅದಕ್ಕಾಗಿ ಬೆಳಗಾವಿ ಲೋಕಸಭೆಯ ಉಪಚುನಾವಣೆಯಲ್ಲಿ ಬಿಜೆಪಿಯವರು ಮನಸ್ಸು ಮಾಡಿ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ ಎಂದರು.