ಚಿಕ್ಕೋಡಿ: ನಾನು ಪ್ರವಾಸದಲ್ಲಿದ್ದೆ, ನನಗೆ ಸಚಿವರ ಖಾತೆ ಹಂಚಿಕೆಯ ಗೊಂದಲ ಹಾಗೂ ಸಚಿವರ ರಾಜೀನಾಮೆ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ಮಾತನಾಡಬಾರದು, ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಖಾತೆ ಹಂಚಿಕೆ ಗೊಂದಲದ ಬಗ್ಗೆ ಗೊತ್ತಿಲ್ಲ; ಸಚಿವೆ ಜೊಲ್ಲೆ - women and children welfare minister shashikala jolle
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೋಸ್ಕರ ಒಳ್ಳೆಯ ನಿರ್ಣಯ ತೆಗೆದುಕೊಂಡಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ ಮಾತನಾಡಿದರು
ಓದಿ:ಕೃಷಿ ಕಾಯ್ದೆ ವಿರೋಧಿಸಿ ನಾಳೆ ಬೆಳಗಾವಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ: ಬಾಬಾಗೌಡ ಪಾಟೀಲ
ಪಟ್ಟಣದಲ್ಲಿ ಮಾತನಾಡಿದ ಅವರು, ನಾಳೆ ನಡೆಯಲಿರುವ ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ. ಯಾಕೆಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೋಸ್ಕರ ಒಳ್ಳೆಯ ನಿರ್ಣಯ ತೆಗೆದುಕೊಂಡಿವೆ. ರೈತರು ತಾವು ಬೆಳೆದ ಬೆಳೆಗಳನ್ನು ತಮಗಿಷ್ಟ ಬಂದ ಸ್ಥಳಗಳಲ್ಲಿ ಮಾರಾಟ ಮಾಡುವ ಅವಕಾಶ ಈ ಕಾಯ್ದೆಯಲ್ಲಿದೆ. ಇದು ರೈತ ವಿರೋಧಿ ಕಾಯ್ದೆಯಲ್ಲ, ರೈತರ ಪರವಾದ ಕಾಯ್ದೆಯಾಗಿದೆ. ನಿಜವಾದ ರೈತರಿಗೆ ಅಸಮಾಧಾನವಿಲ್ಲ ಎಂದರು.