ಬೆಳಗಾವಿ: ನೆರೆ ಹಾವಳಿಯಿಂದ ಬದುಕು ಕಳೆದುಕೊಂಡಿರುವ ನಿರಾಶ್ರಿತರಿಗಾಗಿ ಭಿಕ್ಷೆ ಬೇಡಲು ನಿರ್ಧರಿಸಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇಲ್ಲಿನ ಘಟಪ್ರಭಾ ನದಿ ಪ್ರವಾಹಕ್ಕೆ ನಲುಗಿದ ಗೋಕಾಕ್ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಅವರು, ನಿರಾಶ್ರಿತರಿಗೆ ಪುನಃ ಬದುಕು ಕಟ್ಟಿಕೊಡುವುದಾಗಿ ಭರವಸೆ ನೀಡಿದ್ರು. ಅಲ್ಲದೆ, ನೆರೆಯಿಂದ ನಲುಗಿದವರಿಗೆ ಸಾಂತ್ವನ ಸಹ ಹೇಳಿದರು.
ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ ನಯಾಪೈಸೆ ಸಹ ಬಿಡುಗಡೆ ಮಾಡುತ್ತಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಬರ ನಿರ್ವಹಣೆಗೆ ಸಲ್ಲಿಸಿದ್ದ ಪ್ರಸ್ತಾವನೆಯ ₹1029 ಕೋಟಿಯನ್ನು ಈಗ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರವಾಹ ಸಂತ್ರಸ್ತರಿಗೆ ₹10 ಸಾವಿರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಕಣ್ತೆರೆಸಲು, ನಾನು ಸಂತ್ರಸ್ತರಿಗಾಗಿ ಬೆಂಗಳೂರಿನಲ್ಲಿ ಭಿಕ್ಷೆ ಎತ್ತಲು ತೀರ್ಮಾನಿಸಿದ್ದೇನೆ ಎಂದು ಶಾಸಕಿ ಹೆಬ್ಬಾಳ್ಕರ್ ಹೇಳಿದ್ರು.
ಸಾಲದ ಹಣ ಪಾವತಿಸುವಂತೆ ಒತ್ತಾಯಿಸುವವರ ಹೆಸರು ಬರೆದಿಟ್ಟು, ವಿಷ ಕುಡಿಯುತ್ತೇನೆ ಎಂದು ಅಧಿಕಾರಿಗಳಿಗೆ ಹೇಳಿ ಎಂದು ಸಂತ್ರಸ್ತೆವೋರ್ವಳ ದೂರಿಗೆ ಉತ್ತರಿಸುತ್ತ ಆತ್ಮಹತ್ಯೆಗೆ ಪ್ರಚೋದನೆ ನೀಡುವ ಮಾತಗಳನ್ನಾಡಿದರು ಎಂಬ ಆರೋಪ ಕೇಳಿಬಂದಿದೆ.