ಕರ್ನಾಟಕ

karnataka

ETV Bharat / state

ಹೈಕಮಾಂಡ್ ಟಿಕೆಟ್ ನೀಡಿದ್ರೆ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಶೆಟ್ಟರ್ ಸೊಸೆ - ಶ್ರದ್ಧಾ ಶೆಟ್ಟರ್​,

ಹೈಕಮಾಂಡ್ ಟಿಕೆಟ್ ನೀಡಿದ್ರೆ ಉಪ ಚುನಾವಣೆಗೆ ಸ್ಪರ್ಧಿಸಲು ಸಿದ್ದ ಎನ್ನುವ ಮೂಲಕ ದಿ. ಸುರೇಶ್ ಅಂಗಡಿ ಅವರ ಪುತ್ರಿ, ಸಚಿವ ಶೆಟ್ಟರ್ ಸೊಸೆ ಆಗಿರುವ ಶ್ರದ್ಧಾ ಶೆಟ್ಟರ್​ ಹೇಳಿದ್ದಾರೆ. ಬಿಜೆಪಿಯಲ್ಲಿ ಬೆಳಗಾವಿ ಉಪಚುನಾವಣೆಗೆ ಅಭ್ಯರ್ಥಿ ಯಾರು ಎಂಬುದು ಈವರೆಗೆ ಅಂತಿಮವಾಗಿಲ್ಲ. ಈ ಮಧ್ಯೆ ಶ್ರದ್ಧಾ ಶೆಟ್ಟರ್​ ಅವರು ಚುನಾವಣಾ ಅಖಾಡಕ್ಕಿಳಿಯಲು ಸಜ್ಜಾಗಿರುವುದು ಕುತೂಹಲ ಹೆಚ್ಚಿಸಿದೆ.

I was ready to contest in Lok Sabha By election, I was ready to contest in Lok Sabha By election says Shraddha Shetter, Shraddha Shetter, Shraddha Shetter news, ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ದ, ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ದ ಎಂದ ಶ್ರದ್ಧಾ ಶೆಟ್ಟರ್​, ಶ್ರದ್ಧಾ ಶೆಟ್ಟರ್​, ಶ್ರದ್ಧಾ ಶೆಟ್ಟರ್​ ಸುದ್ದಿ,
ಹೈಕಮಾಂಡ್ ಟಿಕೆಟ್ ನೀಡಿದ್ರೆ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ದ ಎಂದ ಶೆಟ್ಟರ್ ಸೊಸೆ

By

Published : Mar 24, 2021, 2:46 PM IST

Updated : Mar 24, 2021, 7:07 PM IST

ಬೆಳಗಾವಿ:ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ರೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧಳಿದ್ದೇನೆ ಎಂದು ದಿ. ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್ ತಿಳಿಸಿದ್ದಾರೆ.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂಬ ಚರ್ಚೆ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂಬ ಒತ್ತಡವೂ ಇದೆ. ಅಲ್ಲದೆ ಜಿಲ್ಲಾ ನಾಯಕರು ಕೂಡ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್​ಗೆ ತಿಳಿಸಿದ್ದಾರೆ ಎಂದರು.

ನಮಗೆ ಟಿಕೆಟ್ ನೀಡುವಂತೆ ನಮ್ಮ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಹಿನ್ನೆಲೆ ಬಿಜೆಪಿ ಹೈಕಮಾಂಡ್ ನಮಗೆ ಟಿಕೆಟ್ ನೀಡಿದ್ರೆ ಸ್ಪರ್ಧೆಗೆ ಸಿದ್ಧಳಿದ್ದೇನೆ. ಈ ವಿಚಾರದಲ್ಲಿ ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ಟಿಕೆಟ್ ನೀಡಿದ್ರೆ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ದ ಎಂದ ಶೆಟ್ಟರ್ ಸೊಸೆ

ಬೇರೆ ಅಭ್ಯರ್ಥಿಗಳ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಚುನಾವಣೆಗೆ ಸ್ಪರ್ಧಿಸಬೇಕೆಂದು ನಮ್ಮ ಅಭಿಮಾನಿಗಳ ಒತ್ತಾಯ ಇದ್ದು, ಹೈಕಮಾಂಡ್‌ಗೂ ಮನವರಿಕೆ ಮಾಡಲಾಗಿದೆ. ಹೈಕಮಾಂಡ್‌ ಅಂತಿಮ ನಿರ್ಣಯ ಕೈಗೊಳ್ಳಲಿದೆ. ಇನ್ನೆರಡು ದಿನಗಳಲ್ಲಿ ನಿಮಗೂ ಗೊತ್ತಾಗುತ್ತೆ. ನಾನು ದೆಹಲಿಗೇನೂ ಹೋಗಿರಲಿಲ್ಲ, ಬೆಂಗಳೂರಿನಲ್ಲಿದ್ದೆ. ಹೈಕಮಾಂಡ್ ಅಥವಾ ಪಕ್ಷದ ವರಿಷ್ಠರು ಯಾರೂ ಕೂಡ ಈ ಬಗ್ಗೆ ಮಾತನಾಡಿಲ್ಲ. ಟಿಕೆಟ್ ಬಗ್ಗೆ ಏನೂ ಚರ್ಚೆ ಆಗಿಲ್ಲ. ಕುಟುಂಬಕ್ಕೆ ಅವಕಾಶ ಕೊಟ್ಟರೆ ಸ್ಪರ್ಧೆ ಮಾಡ್ತೀವಿ ಅಂತಾ ಹೇಳಿದ್ದೀವಿ ಎಂದರು.

ನಮ್ಮ ತಂದೆ ಜನರ ಜೊತೆ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದರು. ಈ ಕಾರಣಕ್ಕೆ ಅಭಿಮಾನಿಗಳು ಕರೆದ ಸಮಾರಂಭಗಳಿಗೆ ಹೋಗುತ್ತಿದ್ದೇವೆ. ಮುಂದೆಯೂ ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತೇವೆ. ತಂದೆಯವರ ಜೊತೆಗಿದ್ದವರ ಜೊತೆಗೆ ನಾವು ಇರುತ್ತೇವೆ ಎಂದು ಶ್ರದ್ಧಾ ಶೆಟ್ಟರ್​ ಹೇಳಿದ್ರು.

Last Updated : Mar 24, 2021, 7:07 PM IST

ABOUT THE AUTHOR

...view details