ಬೆಳಗಾವಿ:ಜಿಲ್ಲೆಗೆ ಆದಷ್ಟು ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡುವುದರ ಜೊತೆಗೆ, ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ ಮಾಡುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ಧಾರೆ.
ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಯಕಲ್ಪ: ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಭಯ
ಸರ್ಕಾರದಿಂದ ಕೈಗಾರಿಕೆಗಳನ್ನು ಸ್ಥಾಪಿಸುವ ಕೆಲಸ ನಡೆಯಲಿದ್ದು ಸಮಗ್ರ ಅಭಿವೃದ್ಧಿಗೆ ಕಾಯಕಲ್ಪ ಹಾಕಿಕೊಳ್ಳುವ ಭರವಸೆ ನೀಡಿದ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರೈತರ ಜೊತೆಗಿನ ಸಭೆಗೆ ಹಾಜರಾಗಿ ಮಾತನಾಡಿದ ಬೆಳಗಾವಿ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಜಿಲ್ಲೆಯ ಅಭಿವೃದ್ಧಿಗೆ ಸಮರ್ಪಕ ಕೆಲಸ ಅಗತ್ಯ. ಸರ್ಕಾರದಿಂದ ಕೈಗಾರಿಕೆಗಳನ್ನು ಸ್ಥಾಪಿಸುವ ಕೆಲಸ ನಡೆಯಲಿದ್ದು ಸಮಗ್ರ ಅಭಿವೃದ್ಧಿಗೆ ಕಾಯಕಲ್ಪ ಹಾಕಿಕೊಳ್ಳುವ ಭರವಸೆ ನೀಡಿದ್ದಾರೆ.
ರೈತರ ಸಮಸ್ಯೆಗಳನ್ನು ಅರಿತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ರೈತಪರವಾದ ಯೋಜನೆಗಳನ್ನು ರೂಪಿಸಲಾಗಿತ್ತು. ಆದರೆ ನಂತರದ ಬಿಜೆಪಿಯೇತರ ಸರ್ಕಾರಗಳು ರೈತರನ್ನು ಕಡೆಗಣಿಸಿದ್ದು ಅವರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟರು.