ಬೆಳಗಾವಿ: ಹೈಕಮಾಂಡ್ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದ್ರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ನಿಭಾಯಿಸುವೆ.. ಮಾಜಿ ಸಚಿವ ಸತೀಶ್ ಜಾರಕಿಹೊಳಿ
ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ಅವರಿಗೆ ಸಹಕಾರ ಕೊಡಲು ನಿನ್ನೆ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಹೋಗಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ನಗರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ನಾನೇನೂ ಕೇಳಿಲ್ಲ. ಆದರೆ, ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ. ಕೆಪಿಸಿಸಿಗೆ ಸಾರಥಿಯಾರಾಗಲಿದ್ದಾರೆ ಎಂಬುವುದನ್ನು ಹೈಕಮಾಂಡ್ ನಿರ್ಧಿರಿಸುತ್ತದೆ. ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ಅವರಿಗೆ ಸಹಕಾರ ಕೊಡಲು ನಿನ್ನೆ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಹೋಗಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಉಪಚುನಾವಣೆ ಸೋಲಿನಿಂದ ಆತಂಕಪಡುವ ಅಗತ್ಯವಿಲ್ಲ. ನಾಲ್ಕು ಕಾರ್ಯಾಧ್ಯಕ್ಷರ ನೇಮಕ ಸಂಬಂಧ ಹೈಕಮಾಂಡ್ ನಾಯಕರು ಶೀಘ್ರ ಸಭೆ ನಡೆಸಲಿದೆ. ಪ್ರಾದೇಶಿಕ,ಜಾತಿವಾರು ಚರ್ಚೆ ನಡೆಯಲಿದೆ. ನಾಲ್ಕೈದು ಜನ ಪ್ರಮುಖರು ಮೊನ್ನೆಯ ಸಭೆಗೆ ಬಂದಿಲ್ಲ. ರಾಜೀನಾಮೆ ಕುರಿತಂತೆ ಇತ್ಯರ್ಥವಾದ ಬಳಿಕ ಪ್ರತಿಪಕ್ಷದಲ್ಲಿ ಕುಳಿತು ಪ್ರಬಲವಾಗಿ ಕೆಲಸ ಮಾಡಲಾಗುವುದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.