ಅಥಣಿ:ಅಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರದ ಯೋಜನೆ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದಿಂದ ಅಡಹಳ್ಳಿ ಪಿಡಿಒಗೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮ ಪಂಚಾಯತ್ನಲ್ಲಿ ಅಕ್ರಮ ಆರೋಪ: ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ - ಅಥಣಿ ಸುದ್ದಿ
ಅಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರದ ಯೋಜನೆ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತನಿಖ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಮನವಿ ಪತ್ರವನ್ನು ಸಲ್ಲಿಸಿದ ನಂತರ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಪ್ರಹ್ಲಾದ್ ವಾಘ್ಮೋರೆ ಮಾತನಾಡಿ. ಸರ್ಕಾರ ಬಡವರಿಗಾಗಿ ಹಲವಾರು ಯೋಜನೆಗಳನ್ನು ತಂದಿದ್ದರೂ ಸಹ, ಬಡವರಿಗೆ ಸಿಗಬೇಕಾದ ಯೋಜನೆಯ ಲಾಭವನ್ನು ಪಂಚಾಯಿತಿಯ ಸಿಬ್ಬಂದಿ ಅವರವರ ಕುಟುಂಬಗಳಿಗೆ ಬಳಸಿಕೊಂಡು ಸರ್ಕಾರದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬಡವರಿಗೆ ಸಿಗಬೇಕಾದ ಯೋಜನೆಗಳನ್ನು ಸಿಗುವಂತೆ ಮಾಡಬೇಕು. ಇಲ್ಲವಾದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಾಗೂ ಅಡಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.