ಕರ್ನಾಟಕ

karnataka

ETV Bharat / state

ಅಕ್ರಮ ಗೋಮಾಂಸ ಸಾಗಣೆ.. ವಾಹನ ಜಖಂ ಮಾಡಿ ಪೊಲೀಸರಿಗೆ ಒಪ್ಪಿಸಿದ ಶ್ರೀರಾಮಸೇನೆ.. - ಹುಕ್ಕೇರಿ ಪೋಲಿಸ್ ಠಾಣೆ

ಹುಕ್ಕೇರಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಶ್ರೀರಾಮಸೇನಾ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಕ್ರಮ ಗೋಮಾಂಸ ಸಾಗಣೆ;  ವಾಹನ ಜಖಂ ಮಾಡಿ ಪೊಲೀಸರಿಗೆ ಒಪ್ಪಿಸಿದ ಶ್ರೀ ರಾಮಸೇನೆ

By

Published : Sep 6, 2019, 5:46 PM IST

ಚಿಕ್ಕೋಡಿ:ಹುಕ್ಕೇರಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಶ್ರೀರಾಮಸೇನಾ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಕ್ರಮ ಗೋಮಾಂಸ ಸಾಗಣೆ.. ವಾಹನ ಜಖಂ ಮಾಡಿ ಪೊಲೀಸರಿಗೆ ಒಪ್ಪಿಸಿದ ಶ್ರೀರಾಮಸೇನೆ..
ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಗೋ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಸರ್ಕಾರ ಬಂದ್ ಮಾಡಿದ ಹಿನ್ನೆಲೆಯಲ್ಲಿ ಗಡಿಭಾಗದ ಹುಕ್ಕೇರಿ, ಸಂಕೇಶ್ವರ, ಯಮಕನಮರಡಿ ಹಾಗೂ ಗೋಕಾಕ್ ನಗರಗಳಿಂದ ಮಹಾರಾಷ್ಟ್ರದ ಸಾಂಗಲಿ, ಕೊಲ್ಹಾಪುರ, ಮೀರಜ, ಗಡಿಂಗ್ಲಜ ನಗರಗಳಿಗೆ ನಿರಂತರವಾಗಿ ಮಾಂಸ ರಫ್ತು ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಎಲಿಮುನ್ನೋಳಿ ಕ್ರಾಸ್ ಹತ್ತಿರ ಗೋಕಾಕದಿಂದ ಸಂಕೇಶ್ವರ ಕಡೆಗೆ ಹೊರಟಿದ್ದ ಟಾಟಾ ಏಸ್ ಗಾಡಿ ನಂ KA 23 - 3430ರಲ್ಲಿ ಯಾವುದೇ ಲೈಸೆನ್ಸ್ ಇಲ್ಲದೆ ಅನಧಿಕೃತವಾಗಿ ಸುಮಾರು 20 ಸಾವಿರ ರೂಪಾಯಿ ಮೌಲ್ಯದ ಗೋ ಮಾಂಸವನ್ನು ಸಾಗಾಟ ಮಾಡುತ್ತಿದ್ದಾಗ, ಶ್ರೀರಾಮಸೇನಾ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ABOUT THE AUTHOR

...view details