ಕರ್ನಾಟಕ

karnataka

ಅಕ್ರಮವಾಗಿ ಜಾನುವಾರು ಸಾಗಣೆ: ಚಾಲಕನಿಗೆ ಥಳಿತ ವಿಡಿಯೋ ವೈರಲ್​

ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಈ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

By

Published : Aug 2, 2019, 2:20 PM IST

Published : Aug 2, 2019, 2:20 PM IST

ಅಕ್ರಮವಾಗಿ ಜಾನುವಾರು ಸಾಗಣೆ

ಬೆಳಗಾವಿ:ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನ ಚಾಲಕನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.

ಮೂಡಲಗಿಯಿಂದ ಬೆಳಗಾವಿ ಕಡೆಗೆ ಬೊಲೆರೋ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸಲಾಗುತ್ತಿತ್ತು. ವಾಹನ ತಡೆದು ಪರಿಶೀಲಿಸಿದಾಗ ಜಾನುವಾರು ಸಾಗಣೆ ಪತ್ತೆಯಾಗಿದೆ. ಈ ಬಗ್ಗೆ ಚಾಲಕ ಸರಿಯಾಗಿ ಮಾಹಿತಿ ನೀಡದ ಕಾರಣ ಆತನಿಗೆ ಸ್ಥಳೀಯರು ಥಳಿಸಿದ್ದಾರೆ.

ಅಕ್ರಮವಾಗಿ ಜಾನುವಾರು ಸಾಗಣೆ ಆರೋಪಿಗೆ ಥಳಿತ

ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ಚಾಲಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೋಕಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details