ಬೆಳಗಾವಿ:ಮನೆಯಲ್ಲಿ ಗೋವಾ ಮದ್ಯವನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಂಡು ಹೆಚ್ಚಿನ ದರಕ್ಕೆ ಮಾರುತ್ತಿದ್ದ ವ್ಯಕ್ತಿಯನ್ನು ನಗರದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಗೋವಾ ಮದ್ಯ ಮಾರಾಟ : ಆರೋಪಿ ಬಂಧನ - belagavi latest news
ಅಕ್ರಮವಾಗಿ ಗೋವಾ ಮದ್ಯವನ್ನು ಸಂಗ್ರಹಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಗೋವಾ ಮದ್ಯ ಮಾರಾಟ
ರಾಜೇಶ ನಾಯ್ಕ (37) ಬಂಧಿತ ಆರೋಪಿ. ವಿನಾಯಕ ನಗರದಲ್ಲಿರುವ ಅರ್ಪಣ ರೆಸಿಡೆನ್ಸಿ ಅಪಾರ್ಟ್ಮೆಂಟ್ನಲ್ಲಿ ಗೋವಾ ಮದ್ಯ ಸಂಗ್ರಹಿಟ್ಟುಕೊಂಡು ಈತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ವಿವಿಧ ಕಂಪನಿಯ 4.42 ಲಕ್ಷ ರೂ. ಮೌಲ್ಯದ 411 ಸಾರಾಯಿ ಬಾಟಲ್ ವಶಪಡಿಸಿಕೊಳ್ಳಲಾಗಿದೆ. ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.