ಬೆಳಗಾವಿ: ಲಾಕ್ ಡೌನ್ನಿಂದ ನೇಕಾರ ಸಮೂಹ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗಮನಕ್ಕೆ ತಂದಿದ್ದೇನೆ. ಶೀಘ್ರವೇ ನೇಕಾರರ ಸಮಸ್ಯೆಗಳಿಗೆ ಸ್ಪಂದನೆ ಸಿಗುವ ನಿರೀಕ್ಷೆ ಇದೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ತಿಳಿಸಿದರು.
ನೇಕಾರರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದನೆ: ಸಚಿವ ಶ್ರೀಮಂತ ಪಾಟೀಲ - ನೇಕಾರರ ಸಮಸ್ಯೆ
ರಾಜ್ಯದ ನೇಕಾರರ ಸಮಸ್ಯೆಗಳನ್ನು ಸಿಎಂ ಹಾಗೂ ಸಚಿವೆ ಸ್ಮೃತಿ ಇರಾನಿ ಗಮನಕ್ಕೆ ತರಲಾಗಿದೆ. ಅಲ್ಲದೇ ನೇಕಾರರ ಬಳಿ ಇರುವ ಸೀರೆಗಳನ್ನು ಸರ್ಕಾರ ಖರೀದಿಸಬೇಕು ಎಂಬುದರ ಬಗ್ಗೆ ಕೂಡ ಚರ್ಚೆಗಳು ನಡೆಯುತ್ತಿವೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನೇಕಾರ ಸಮ್ಮಾನ್ ಯೋಜನೆಯಡಿ ಪರಿಹಾರ ನೀಡಲಾಗಿದೆ. ನೇಕಾರ ಕೂಲಿ ಕಾರ್ಮಿಕರು ಆತಂಕ ಪಡಬೇಕಿಲ್ಲ. ಮಗ್ಗ ಹೊಂದಿರುವ ಮಾಲೀಕರಿಂದ ಪತ್ರ ನೀಡಿದರೆ ಕಾರ್ಮಿಕರಿಗೂ ನೇಕಾರ ಸಮ್ಮಾನ್ ಯೋಜನೆಯಡಿ ಪರಿಹಾರ ಸಿಗಲಿದೆ ಎಂದರು.
ಶಾಲಾ ಸಮವಸ್ತ್ರದ ಬಟ್ಟೆ ನೇಕಾರರಿಂದ ಖರೀದಿ ಹಾಗೂ ಆತ್ಮಹತ್ಯೆಗೆ ಶರಣಾದ ನೇಕಾರರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ. ಅಲ್ಲದೇ ನೇಕಾರರ ಬಳಿ ಇರುವ ಸೀರೆಗಳನ್ನು ಸರ್ಕಾರ ಖರೀದಿಸಬೇಕು ಎಂಬ ಬೇಡಿಕೆ ಇದೆ. ಇದರ ಬಗ್ಗೆ ಕೂಡ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದರು.