ಬೆಳಗಾವಿ :ಲೋಕಸಭೆ ಉಪಚುನಾವಣೆಯಲ್ಲಿ 3 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿ ಬೈ ಎಲೆಕ್ಷನ್ ಕುರಿತಂತೆ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ.. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಸ್ಕಿ, ಬಸವಕಲ್ಯಾಣ ವಿಧಾನಸಭೆ, ಬೆಳಗಾವಿ ಲೋಕಸಭೆ ಉಪಚುನಾವಣೆ ಬಿಜೆಪಿ ಪಾಲಾಗುವುದು ನಿಶ್ಚಿತ. ಬೆಳಗಾವಿ ಉಪಚುನಾವಣೆಗೆ ಸ್ಪರ್ಧಿಸಿದ ಮಂಗಳಾ ಅಂಗಡಿ ಅವರು ಮೂರು ಲಕ್ಷಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಮಂಗಳಾ ಅವರನ್ನು ಗೆಲ್ಲಿಸಲು ಜಿಲ್ಲೆಯ ಜನರು ತೀರ್ಮಾನ ಮಾಡಿದ್ದಾರೆ.
ಓದಿ:ಬೆಲೆ ಏರಿಕೆ ಕಾಂಗ್ರೆಸ್ ಕಾಲದಲ್ಲಿ, ಇಂದಿರಾ ಗಾಂಧಿ ಕಾಲದಲ್ಲೂ ಇತ್ತು.. ಸಚಿವ ಜಗದೀಶ್ ಶೆಟ್ಟರ್
ಬೆಳಗಾವಿ ಉಪಚುನಾವಣೆ ಉಸ್ತುವಾರಿಯನ್ನು ಜಗದೀಶ್ ಶೆಟ್ಟರ್ ಅವರಿಗೆ ನೀಡಲಾಗಿದೆ. ಅವರೊಂದಿಗೆ ಡಿಸಿಎಂ ಗೋವಿಂದ ಕಾರಜೋಳ, ನಾನು ಸೇರಿ ಮೂವರು ಉಸ್ತುವಾರಿಗಳಾಗಿದ್ದೇವೆ. ಜಿಲ್ಲಾ ಮಂತ್ರಿಗಳ ಬಗ್ಗೆ ನಿರ್ಧಾರ ಆಗಿಲ್ಲ. ಆದರೂ ಜಿಲ್ಲಾಮಂತ್ರಿಯಾಗಿ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಉಸ್ತುವಾರಿ ಸಿಕ್ಕರೂ ಸರಿ, ಸಿಗದಿದ್ದರೂ ಸರಿ, ನಮ್ಮ ಜವಾಬ್ದಾರಿ ನಿರ್ವಹಿಸುತ್ತೇವೆ ಎಂದರು.