ಬೆಳಗಾವಿ:ಸಾಂಬ್ರಾ ವಿಮಾನ ನಿಲ್ದಾಣದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ - ಸ್ವಾತಂತ್ರ್ಯ ದಿನಾಚರಣೆ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡಿದರು. ಬಳಿಕ ಕರ್ನಾಟಕ ರಾಜ್ಯ ಕೈಗಾರಿಕಾ ಮೀಸಲು ಪಡೆಯಿಂದ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಮಾತನಾಡಿದ ರಾಜೇಶ್ ಕುಮಾರ್ ಮೌರ್ಯ, ಕೋವಿಡ್ ಹರಡದಂತೆ ಹಾಗೂ ಪ್ರಯಾಣಿಕರ ಸುರಕ್ಷತೆಗೆ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಿಲ್ದಾಣದ ಸಿಬ್ಬಂದಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯ ಶ್ಲಾಘನೀಯ. ವಿಮಾನ ಸೇವೆ ಮರು ಆರಂಭವಾದ ಬಳಿಕ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ ಎಂದರು. ಇದೇ ವೇಳೆ ವಿಮಾನ ನಿಲ್ದಾಣ ಆವರಣದಲ್ಲಿ ಸಸಿ ನೆಡಲಾಯಿತು.