ಬೆಳಗಾವಿ : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸ್ಥೆಯ ವತಿಯಿಂದ ಒಂದು ಕೋಟಿ ರೂ. ಗೂ ಅಧಿಕ ಸಾಮಗ್ರಿಗಳನ್ನು ನೆರೆ ಸಂತ್ರಸ್ತರಿಗೆ ವಿತರಿಸಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥ ನಾಗಣ್ಣ ತಿಳಿಸಿದರು.
ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ - north karnataka
ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿ ಮನೆ ಮಠ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ನಿತ್ಯ ಬಳಕೆಯ ವಸ್ತುಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನೀಡಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗಣ್ಣ, ರಾಜ್ಯದಲ್ಲಿ ಸುಮಾರು 16 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಹೋಗಿದೆ. ಮಹಾರಾಷ್ಟ್ರದ ಮಳೆಯಿಂದ ಪ್ರವಾಹದಕ್ಕೆ ಸಿಲುಕಿ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳು ಸಂಪೂರ್ಣ ಮನೆಗಳು ಜಲಾವೃತವಾಗಿವೆ. ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿತ್ಯ ಬಳಕೆಯ ವಸ್ತುಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನೀಡಿದೆ ಎಂದರು.
ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಮಳೆ ಹಾಗೂ ಪ್ರವಾಹಕ್ಕೆ ಜನ ಜೀವನ ನೀರಿನಲ್ಲಿ ತೆಲಿ ಹೋಗಿವೆ. ಸಾಕಷ್ಟು ಪ್ರಮಾಣದಲ್ಲಿ ಜನ ಜೀವನ ಹಾನಿಯಾಗಿದೆ. ಸರಕಾರ ಆದಷ್ಟು ಬೇಗ ಜನರಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಬೇಕು ಎಂದರು.