ಬೆಳಗಾವಿ:ಕಾರ್ಮಿಕರ ಕಲ್ಯಾಣ ಮಂಡಳಿ ಸಂಗ್ರಹಸಿದ ಹಣವನ್ನು ಕಟ್ಟಡ ನಿರ್ಮಾಣ ಹಾಗೂ ನರೇಗಾ ಕಾರ್ಮಿಕರ ಕಲ್ಯಾಣಕ್ಕೆ ಬಳಸಬೇಕೆಂದು ಒತ್ತಾಯಿಸಿ ಕಟ್ಟಡ ಕಾರ್ಮಿಕರು, ಮಹಿಳೆಯರು ಹಾಗೂ ಕಾರ್ಮಿಕರ ಸಂಘದ ವತಿಯಿಂದ ಡಿಸಿ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.
ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸುವರ್ಣ ಸೌಧಕ್ಕೆ ಸ್ಥಳಾಂತರಿಸುವಂತೆ ಒತ್ತಾಯ
ಕಾರ್ಮಿಕರ ಕಲ್ಯಾಣ ಮಂಡಳಿ ಸಂಗ್ರಹಸಿದ ಹಣವನ್ನು ಕಟ್ಟಡ ನಿರ್ಮಾಣ ಹಾಗೂ ನರೇಗಾ ಕಾರ್ಮಿಕರ ಕಲ್ಯಾಣಕ್ಕೆ ಬಳಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಕಟ್ಟಡ ಹಾಗೂ ನರೇಗಾ ಕಾರ್ಮಿಕರು 15 ಲಕ್ಷಕ್ಕಿಂತಲೂ ಹೆಚ್ಚು ಜನರಿದ್ದಾರೆ. ಅವರ ಕಲ್ಯಾಣಕ್ಕಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 8 ಸಾವಿರ ಕೋಟಿಗಿಂತ ಹೆಚ್ಚು ಹಣವನ್ನು ಸಂಗ್ರಹ ಮಾಡಲಾಗಿದೆ. ಅದರ ವಾರ್ಷಿಕ ಬಡ್ಡಿ 500 ಕೋಟಿಯಷ್ಟು ಬರುತ್ತಿದೆ. ಹೀಗಿದ್ದಾಗ 1996ರ ಅನ್ವಯ ಈ ಎಲ್ಲ ಹಣವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಬೇಕು ಎಂದರು.
ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಬೆಂಗಳೂರಿನಿಂದ ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡಬೇಕು. ಸಿಬ್ಬಂದಿಗೆ ವಾಹನ ಹಾಗೂ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಇದಲ್ಲದೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.